Slide
Slide
Slide
previous arrow
next arrow

ಕ್ರೀಡಾಕೂಟ: ರಾಜು ಗೌಡಗೆ ಮೂರು ಬಂಗಾರ, ಒಂದು ಬೆಳ್ಳಿ

300x250 AD

ಅಂಕೋಲಾ: ದೆಹಲಿಯ ನೆಹರು ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ತಾಲೂಕಿನ ಬೆಳಂಬಾರದ, ಸದ್ಯ ಕಾರವಾರದ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಫ್ರೌಡಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ರಾಜು ಗೌಡ ರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಶೇಷ ಸಾಧನೆ ಮಾಡಿದ್ದಾರೆ.
ಗುಂಡು ಎಸೆತದಲ್ಲಿ ಪ್ರಥಮ, ಜಾವೆಲಿನ್ ಎಸೆತದಲ್ಲಿ ಪ್ರಥಮ, ಹ್ಯಾಮರ್ ಎಸೆತದಲ್ಲಿ ಪ್ರಥಮ ಹಾಗೂ ಪವರ್ ಲಿಫ್ಟ್ ನಲ್ಲಿ ದ್ವಿತೀಯ ಸ್ಥಾನ ಹೀಗೆ ಮೂರು ಬಂಗಾರ ಹಾಗೂ ಒಂದು ಬೆಳ್ಳಿ ಪದಕ ಪಡೆದು ವಿಶೇಷ ಸಾಧನೆ ಮಾಡಿರುವ ರಾಜು ಅವರ ಈ ಸಾಧನೆಗೆ ಶಾಲಾ ಶಿಕ್ಷಕ ಬಳಗ, ಗೆಳೆಯರ ಬಳಗ ಹಾಗೂ ಸಮಾಜದ ಬಂಧುಗಳು ಸಂತಸ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top