• Slide
    Slide
    Slide
    previous arrow
    next arrow
  • ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ನೋಂದಣಿ

    300x250 AD

    ಕಾರವಾರ: ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ ಬೌದ್ಧಿಕ ಆಸ್ತಿ ಹಕ್ಕುಗಳು (ಐಪಿಆರ್) ಮತ್ತು ವಾಣಿಜ್ಯೋದ್ಯಮ ಅಭಿವೃದ್ಧಿ (ಇಡಿ) ಕಾರ್ಯಾಗಾರವನ್ನು ಜುಲೈ 11ರಿಂದ 17ರವರೆಗೆ ಹಮ್ಮಿಕೊಳ್ಳಲಾಗಿದೆ.
    ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಈ ಕಾರ್ಯಾಗಾರದಲ್ಲಿ ಭಾಗವಹಿಸಲಿಚ್ಛಿಸುವ ಪ್ರತಿನಿಧಿಗಳು ಜುಲೈ 5ರೊಳಗಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29721550 ಅಥವಾ ಅಕಾಡೆಮಿಯ ವೆಬ್‌ಸೈಟ್ www.kstacademy.in ಗೆ ಸಂಪರ್ಕಿಸಲು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top