Slide
Slide
Slide
previous arrow
next arrow

ಸದ್ಯಕ್ಕೆ ಸಿಗಲ್ಲ ಪಡಿತರ ಚೀಟಿ!!

300x250 AD

ಕಾರವಾರ: ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಇದರಿಂದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬೇಡಿಕೆ ಹೆಚ್ಚಾಗಿದೆ.
ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಹಾರ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೀಗಾಗಿ ಹೊಸ ಪಡಿತರ ಚೀಟಿ ಸದ್ಯಕ್ಕೆ ಸಿಗುವುದಿಲ್ಲ ಎಂದು ಹೇಳಲಾಗಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಾದಾಗಿನಿಂದ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಿಲ್ಲಿಸಲಾಗಿದೆ. ಅಂದಿನಿAದ ಹೊಸದಾಗಿ ಬಿಪಿಎಲ್, ಅಂತ್ಯೋದಯ ಕಾರ್ಡುಗಳನ್ನು ನೀಡುತ್ತಿಲ್ಲ.
ಬಿಪಿಎಲ್ ಪಡಿತರ ಚೀಟಿ ಕೋರಿ ಸಲ್ಲಿಸಲಾದ ಅರ್ಜಿಗಳಲ್ಲಿ 3,43,856 ಅರ್ಜಿಗಳು ಬಾಕಿ ಉಳಿದಿವೆ. ಸರ್ಕಾರದ ಅನುಮತಿ ಪಡೆಯಲು ಆಹಾರ ಇಲಾಖೆ ಕಾಯುತ್ತಿದ್ದು, ಅನುಮತಿ ದೊರೆತಲ್ಲಿ ವಿಲೇವಾರಿ ಪ್ರಕ್ರಿಯೆ ಆರಂಭಿಸಲಾಗುವುದು. ಇನ್ನು ನಿಗದಿತ ಮಾನದಂಡ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕವಾಗಿ ಸಬಲರಾಗಿದ್ದವರು ಪಡೆದುಕೊಂಡಿದ್ದ 3.30 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ.
3,08, 345 ಬಿಪಿಎಲ್ ಕಾರ್ಡ್ಗಳು ಹಾಗೂ 21,679 ಅಂತ್ಯೋದಯ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಕೆಲವು ಕಾರ್ಡುಗಳನ್ನು ಎಪಿಎಲ್‌ಗೆ ಬದಲಾವಣೆ ಮಾಡಿಕೊಡಲಾಗಿದೆ. 17,338 ಸರ್ಕಾರಿ, ಅರೆ ಸರ್ಕಾರಿ ವಲಯದ ನೌಕರರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದು, ಅವುಗಳನ್ನು ರದ್ದು ಮಾಡಲಾಗಿದೆ.

300x250 AD
Share This
300x250 AD
300x250 AD
300x250 AD
Back to top