ಸಿದ್ದಾಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಉತ್ತರ ಕನ್ನಡ, ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ (ರಿ), ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಸಿದ್ದಾಪುರ ಹಾಗೂ ವಿವಿಧ ಇಲಾಖೆ, ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ-2023 ‘ನಮಗೆ ಆಹಾರ ಬೇಕು, ತಂಬಾಕು ಅಲ್ಲ’ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ತಾಲೂಕು ಮಟ್ಟದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಥಾ ಕಾರ್ಯಕ್ರಮವನ್ನು ಬೆಳಗ್ಗೆ 10:30ಕ್ಕೆ ಹಮ್ಮಿಕೊಳ್ಳಲಾಗಿದೆ.
ಇಂದು ವಿಶ್ವ ತಂಬಾಕು ರಹಿತ ದಿನ ಆಚರಣೆ
