Slide
Slide
Slide
previous arrow
next arrow

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

300x250 AD

ಕಾರವಾರ: 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಯಾಟ್ಸ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿರುತ್ತದೆ.
ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top