Slide
Slide
Slide
previous arrow
next arrow

ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಆಹ್ವಾನ

300x250 AD

ಕಾರವಾರ: 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 22 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 2,500 ರೂ. ಶಿಷ್ಯವೇತನ ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‌ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ಜು.01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15ರಿಂದ 23ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆಂಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.
ಡಿಪ್ಲೋಮಾ ಕೋರ್ಸ್ ಗಳಿಗಾಗಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) 22 ಅಭ್ಯರ್ಥಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ನಮೂನೆಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ.: 08372-297221, ಮೊಬೈಲ್ ಸಂಖ್ಯೆ: 9448644074 ಅಥವಾ ಆಯಾ ಜಿಲ್ಲೆಯ ಜಂಟಿ/ ಉಪ/ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ನರಸಾಪುರ, ಗದಗ- ಬೆಟಗೇರಿಗೆ ಜೂನ್ 6ರೊಳಗಾಗಿ ಸಲ್ಲಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top