ಹೊನ್ನಾವರ: ಕುಡಿಯುವ ನೀರು ಹಾಗೂ ಮಳೆಗಾಲದಲ್ಲಿ ನೆರೆ ಸಮಸ್ಯೆ ಸಾರ್ವಜನಿಕರಿಗೆ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ತಾ.ಪಂ. ಆಡಳಿತಾಧಿಕಾರಿ ವಿನೋದ ಅಣ್ವೇಕರ್ ಸೂಚಿಸಿದರು.
ತಾ.ಪಂ. ಸಭಾಭವನದಲ್ಲಿ ಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬೇಸಿಗೆಯ ಸಮಯದಲ್ಲಿ ಗ್ರಾಮ ಪಂಚಾಯಿತಿಗಳಿಂದ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದು, ಹೊನ್ನಾವರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಭಾಗಗಳಿಗೆ ನೀರನ್ನು ಸಕಾಲದಲ್ಲಿ ಪೂರೈಸುವುದರ ಮೂಲಕ ಜನಸಾಮಾನ್ಯರ ಸಮಸ್ಯೆಗೆ ನೆರವಾಗಿದ್ದೀರಿ. ಇನ್ನು ಮಳೆ ಆರಂಭವಾಗುವರೆಗೂ ಇದೇ ರೀತಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಎಸ್.ಎಸ್.ಎಲ್.ಸಿಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿರುವುದಕ್ಕೆ ಶಿಕ್ಷಣ ಇಲಾಖೆಯನ್ನು ಅಭಿನಂದಿಸಿದರು. ಶಾಲೆಗಳು ಪುನರಾರಂಭವಾಗುತ್ತಿದ್ದು ಬಿಸಿಯೂಟ ವ್ಯವಸ್ಥೆ ಮೂಲಭೂತ ಸೌಲಭ್ಯ ಕಲ್ಪಿಸುವಿಕೆ ಶುದ್ಧ ಕುಡಿಯುವ ನೀರಿನ ಪೂರೈಕೆ ಮಾಡಲು ಸೂಚಿಸಿದರು. ನೆರೆಕಾಲಕ್ಕೆ ಬರಬಹುದಾದ ಸಮಸ್ಯೆಗಳಿಗೆ ಪಂಚಾಯತ್ ನೋಡಲ್ ಅಧಿಕಾರಿಗಳು ತುರ್ತು ಸಭೆಯನ್ನು ನಡೆಸಿ ಕಾಳಜಿ ಕೇಂದ್ರಗಳನ್ನು ಗುರುತಿಸಿ ಜನರ ಕಷ್ಟಕ್ಕೆ ಸ್ಪಂದಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. 2023-24ನೇ ಸಾಲಿನ ತಾಲೂಕು ಪಂಚಾಯತ್ ಆಯವ್ಯಯವನ್ನು ಸಾಮಾನ್ಯ ಸಭೆಯಲ್ಲಿ ಮಂಡಿಸಲಾಯಿತು. ಸಭೆಯಲ್ಲಿ ಶಿಕ್ಷಣ, ಆರೋಗ್ಯ, ಪಂಚಾಯತ್ ರಾಜ್, ಶಿಶು ಅಭಿವೃದ್ಧಿ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಅರಣ್ಯ, ಹೆಸ್ಕಾಂ, ಮೀನುಗಾರಿಕೆ, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆ, ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ತಮ್ಮ ವರದಿಯನ್ನು ಮಂಡಿಸಿದರು.
ತಾ.ಪA. ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ಮಾತನಾಡಿ ಗ್ರಾಮೀಣ ಭಾಗದ ಜನಸಾಮಾನ್ಯರ ಕಷÀ್ಟಕ್ಕೆ ಸ್ಪಂದಿಸುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಲು ಸೂಚಿಸಿದರು. ಗ್ರೇಡ್-2 ತಹಶೀಲ್ದಾರ್ ಉಷಾ ಪಾವಸ್ಕರ್, ನೆರೆ ಸಂದರ್ಭದಲ್ಲಿ ಅಧಿಕಾರಿಗಳು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ತಾಲೂಕು ಆಡಳಿತಕ್ಕೆ ಸ್ಪಂದಿಸುವAತೆ ಸೂಚಿಸಿದರು.
ತಾಲೂಕ ಪಂಚಾಯತ್ ವ್ಯವಸ್ಥಾಪಕ ರಾಮ್ ಭಟ್ ಸ್ವಾಗತಿಸಿದರು. ಸಿಬ್ಬಂದಿ ಬಾಲಚಂದ್ರ ನಾಯ್ಕ ವಂದಿಸಿದರು