ಕುಮಟಾ: ತಾಲೂಕಿನ ಕಲಭಾಗ ಗ್ರಾಮ ಪಂಚಾಯತ ವ್ಯಾಪ್ತಿಯ ಮೀನುಮಾರುಕಟ್ಟೆಯಿಂದ ಅಳ್ವೆಕೋಡಿ ಕ್ರಾಸ್‍ವರೆಗಿನ ನಿರ್ಮಾಣದ ಹಂತದಲ್ಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಭಾನುವಾರ ಪರಿಶೀಲನೆ ನಡೆಸಿ, ಗುಣಮಟ್ಟದ ಕಾಮಗಾರಿಯನ್ನು ನಡೆಸುವಂತೆ ಸಂಬಂಧಪಟ್ಟ ಇಲಾಖೆಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ನಂತರ ಮಾತನಾಡಿದ ಅವರು ಪಟ್ಟಣದಲ್ಲಿ ಬಹುತೇಕ ರಸ್ತೆಗಳು ಉತ್ತಮವಾಗಿ ನಿರ್ಮಾಣಗೊಂಡಿದೆ.ಈ ನಿಟ್ಟಿನಲ್ಲಿ ಪ್ರತಿಯೊಂದು ರಸ್ತೆಯೂ ಕೂಡ ಗುಣಮಟ್ಟದಾಗಿರಬೇಕೆಂಬ ಆಶಯದೊಂದಿಗೆ ರಸ್ತೆ ಕಾಮಗಾರಿಗಳನ್ನು ವೀಕ್ಷಿಸಿ, ಅವುಗಳ ಮಾಹಿತಿ ತಿಳಿದುಕೊಳ್ಳುತ್ತಿದ್ದೇನೆ.ಖುದ್ದು ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಅನಿಲ ಹರ್ಮಲಕರ್, ತುಳುಸು ಗೌಡ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸೇರಿದಂತೆ ಇನ್ನಿತರರು ಇದ್ದರು