Slide
Slide
Slide
previous arrow
next arrow

ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

300x250 AD

ಕುಮಟಾ: ಬೇಸಿಗೆ ರಜೆ ಮುಗಿಸಿ ಶಾಲೆಗೆ ಆಗಮಿಸಿದ ಮಕ್ಕಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಪಟ್ಟಣದ ನೆಲ್ಲಿಕೇರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಂಭ್ರಮದಿಂದ ನಡೆಯಿತು.

ತಳಿರು ತೋರಣಗಳಿಂದ ಶೃಂಗರಿಸಲಾದ ಕುಮಟಾ ಪಟ್ಟಣದ ನೆಲ್ಲಿಕೇರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ದಿನಕರ ಶೆಟ್ಟಿ ಅವರು ಗಿಡಗಳಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಅನೇಕ ಹಿರಿಯರ ಶ್ರಮದ ಫಲವಾಗಿ ಪ್ರಾರಂಭವಾದ ನೆಲ್ಲಿಕೇರಿ ಶಾಲೆ ತಾಲೂಕಿನಲ್ಲಿ ಪ್ರಸಿದ್ದಿ ಪಡೆದಿದೆ. ನಾನು ಸಹ ಇದೆ ಶಾಲೆಯಲ್ಲಿ ಏಳನೇ ತರಗತಿಯವರೆಗೂ ಶಿಕ್ಷಣ ಪಡೆದಿರುವ ಹೆಮ್ಮೆ ನನಗಿದೆ. ನಾನು ಶಾಸಕನಾಗಿರುವ ಎಲ್ಲ ಸಂದರ್ಭದಲ್ಲಿಯು ಶಿಕ್ಷಣಕ್ಕಾಗಿ ವಿಶೇಷವಾದ ಕಾಳಜಿಯನ್ನು ವಹಿಸಿದ್ದು, ಹಿಂದಿನ ಸರ್ಕಾರದಲ್ಲಿ ಶಾಲೆಗೆ ಕಟ್ಟಡಗಳ ನಿರ್ಮಾಣವನ್ನು ಮಾಡಿಸಿದ್ದೇನೆ. ಪ್ರಾಥಮಿಕ ಶಾಲಾ ಶಿಕ್ಷಣ ಅತ್ಯಂತ ಮಹತ್ವದ ಹಂತವಾಗಿದ್ದು ,ಶಿಕ್ಷಕರ ಜವಾಬ್ದಾರಿಯ ಅವಶ್ಯಕತೆ ತುಂಬಾ ಇದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಲ್ ಭಟ್ ಮಾತನಾಡಿ, ಈ ವರ್ಷ ಗುಣಾತ್ಮಕ ಶೈಕ್ಷಣಿಕ ವರ್ಷ ಎಂಬ ಘೋಷಣೆಯನ್ನು ಮಾಡಲಾಗಿದ್ದು, ಅದರಂತೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಗುರಿಯನ್ನು ಹಮ್ಮಿಕೊಂಡಿದೆ. ಕುಮಟಾ ತಾಲೂಕಿನ ನೆಲ್ಲಿಕೆರಿ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ 398 ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 450 ವಿದ್ಯಾರ್ಥಿಗಳಿದ್ದಾರೆ. ಎಲ್ ಕೆಜಿಯಲ್ಲಿ ಕಳೆದ ವರ್ಷದಿಂದ 60 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ಬಾರಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿಯೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಒಂದು ಸೆಟ್ ಸಮವಸ್ತ್ರ ಹಾಗೂ ಬಿಸಿಯೂಟ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಹಾಗೂ ನೀರಿನ ಸಮಸ್ಯೆ ಇರುವ ಕೆಲವು ಶಾಲೆಗಳಲ್ಲಿ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

300x250 AD

ಶಾಲಾ ಪ್ರಾರಂಭೊತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಶಾಸಕರಾದ ದಿನಕರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ಉಪನ್ಯಾಸಕರಾದ ಲತಾ ಹೆಬ್ಬಾರ ವಹಿಸಿದ್ದರು. ಬಿಆರ್‌ಸಿ ರೇಖಾ ನಾಯ್ಕ, ಎಸ್ ಡಿ ಎಮ್ ಸಿ ಉಪಾಧ್ಯಕ್ಷರಾದ ನಿತ್ಯಾನಂದ ನಾಯ್ಕ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಎಸ್ ಜಿ ಭಟ್ ಎಲ್ಲರನ್ನು ಸ್ವಾಗತಿಸಿದರು. ಶಿಕ್ಷಕರಾದ ಬಿರದಾಸ ಗುನಗಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಎಸ್ ಡಿ ಎಮ್ ಸಿ ಸದಸ್ಯರು, ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top