• Slide
    Slide
    Slide
    previous arrow
    next arrow
  • ಯುವ ಗುತ್ತಿಗೆದಾರ ಆತ್ಮಹತ್ಯೆ!

    300x250 AD

    ಭಟ್ಕಳ: ಯುವ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಯ್ಕಿಣಿ ಗ್ರಾಮದ ಬಾಕಡಕೇರಿಯಲ್ಲಿ ವರದಿಯಾಗಿದೆ.

    ಶಿರಾಲಿ ಮಣ್ಣಹೊಂಡ ನಿವಾಸಿ ದಿನೇಶ ನಾಯ್ಕ (28) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ. ರಸ್ತೆ ಮತ್ತು ಇನ್ನಿತರ ಕಾಮಗಾರಿಗಳ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ ಈತ, ಕೆಲಸಕ್ಕೆ ಬೆಳಿಗ್ಗೆ ಮನೆಯಿಂದ ಹೋದವನು ಮನೆಗೆ ಬಾರದೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ವಿಕೊಂಡು ಬಾಕಡಕೇರಿ ಸ್ಮಶಾನದ ಸಮೀಪ ಗೇರು ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

    300x250 AD

    ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಮೃತನ ಅಣ್ಣ ಸುಬ್ರಾಯ ನಾಯ್ಕ ದೂರು ನೀಡಿದ್ದು, ದೂರನ್ನು ದಾಖಲಿಸಿ ಕೊಂಡ ಪಿಎಸ್‌ಐ ಮಂಜುನಾಥ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನ ಮುರ್ಡೇಶ್ವರ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top