ಯಲ್ಲಾಪುರ: ರಾಜ್ಯದಲ್ಲಿ ಸೋಮವಾರದಿಂದ ಹಂತ ಹಂತವಾಗಿ ಶಾಲೆಯನ್ನು ಪ್ರಾರಂಭಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಬಹುತೆಕವಾಗಿ 9 ರಿಂದ 12 ನೇ ತರಗತಿ ಆರಂಭವಾಗಿದೆ.
ಈ ಹಿನ್ನೆಲೆಯಲ್ಲಿ ಸಚಿವ ಶಿವರಾಮ ಹೆಬ್ಬಾರ್ ಪಟ್ಟಣದ ಕಾಳಮ್ಮನಗರದ ಸರಕಾರಿ ಪ್ರೌಢಶಾಲಾ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಸುರಕ್ಷತೆಗಾಗಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪ್ರೋತ್ಸಾಹ ನೀಡಿದರು.
ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿಸುವಂತೆ ಸೂಚಿಸಿದರು ಸರಕಾರ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಎಲ್ಲಾ ರೀತಿಯ ಸುರಕ್ಷಾ ಕ್ರಮವನ್ನು ತೆಗೆದುಕೊಂಡಿದೆ ಯಾವುದೇ ಆತಂಕ ಇಲ್ಲದೆ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪಾಲಕರಿಗೆ ಮನವಿ ಮಾಡಿದರು .
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಹಾಗೂ
ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಶಿರಿಷ್ ಪ್ರಭು, ಪ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ಅಮಿತ ಅಂಗಡಿ, ಪ್ರಮುಖರಾದ ಗಣಪತಿ ಮುದ್ದೆಪಾಲ್ ಹಾಗೂ ಶಾಲಾ – ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು ಹಾಜರಿದ್ದರು.