Slide
Slide
Slide
previous arrow
next arrow

ಆರ್.ವಿ.ದೇಶಪಾಂಡೆಗೆ ಕಸಾಪದಿಂದ ಸನ್ಮಾನ

300x250 AD

ದಾಂಡೇಲಿ: ರಾಜ್ಯ ವಿಧಾನಸಭೆಗೆ 9ನೇ ಬಾರಿಗೆ ಆಯ್ಕೆಯಾದ ಹಳಿಯಾಳ, ದಾಂಡೇಲಿ, ಜೊಯಿಡಾ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆಯವರನ್ನು ಕನ್ನಡ ಸಾಹಿತ್ಯ ಪರಿಷತ್ ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾ ತಾಲ್ಲೂಕು ಘಟಕದ ಪರವಾಗಿ ಸನ್ಮಾನಿಸಲಾಯಿತು.

ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಆರ್.ವಿ.ದೇಶಪಾಂಡೆ, ಎಲ್ಲರ ಸಹಕಾರದಲ್ಲಿ 9ನೇ ಬಾರಿಗೂ ಗೆಲುವು ಸಾಧಿಸಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನನ್ನನ್ನು ನಾನು ತೊಡಗಿಸಿಕೊಳ್ಳಲು ನಿಮ್ಮೆಲ್ಲರ ಈ ಪ್ರೀತಿ ನನಗೆ ಪ್ರೇರಣೆಯಾಗಲಿದೆ ಎಂದರು.

300x250 AD

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷರಾದ ಬಿ.ಎನ್.ವಾಸರೆ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಮುರ್ತುಜಾ ಹುಸೇನ್ ಆನೆಹೊಸೂರು, ಕಸಾಪ ಜೋಯಿಡಾ ತಾಲ್ಲೂಕು ಘಟಕದ ಅಧ್ಯಕ್ಷ ಪಾಂಡುರಂಗ ಪಟಗಾರ, ಕಸಾಪ ಹಳಿಯಾಳ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮಂಗಲಾ ಅಂಗಡಿ, ದಾಂಡೇಲಿ ತಾಲ್ಲೂಕು ಘಟಕದ ನಾರಾಯಣ ನಾಯ್ಕ, ಹಾಗೂ ಕಸಾಪ ತಾಲ್ಲೂಕು ಘಟಕಗಳ ಪದಾಧಿಕಾರಿಗಳು, ಕಸಾಪ ಅಜೀವ ಸದಸ್ಯರು, ಪತ್ರಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top