Slide
Slide
Slide
previous arrow
next arrow

ಹಾರ್ಲಿಯಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ದೇಶಪಾಂಡೆ ತಾಕೀತು

300x250 AD

ಜೊಯಿಡಾ: ತಾಲೂಕಿನ ರಾಮನಗರ ಗ್ರಾಮ ಪಂಚಾಯತ ವ್ಯಾಪ್ತಿಯ ಹಾರ್ಲಿ ಗ್ರಾಮದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಗಮನ ಹರಿಸಿ ಹಾರ್ಲಿ ಗ್ರಾಮದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಆರ್.ವಿ.ದೇಶಪಾಂಡೆ ತಾಕೀತು ಮಾಡಿದರು.

ಶಾಸಕ ಆರ್.ವಿ.ದೇಶಪಾಂಡೆ ರಾಮನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಹಾರ್ಲಿ ಗ್ರಾಮದ ಜನರು ನಮಗೆ ಕುಡಿಯುವ ನೀರು ಹಾಗೂ ದಿನಬಳಕೆ ನೀರು ಸಿಗುತ್ತಿಲ್ಲ. ಅಧಿಕಾರಿಗಳು ಲಕ್ಷ್ಯ ವಹಿಸುತ್ತಿಲ್ಲ. ನೀರಿನ ಟ್ಯಾಂಕರ್ ಮೂಲಕ ನೀರು ಒದಗಿಸುತ್ತೇವೆ ಎಂದು ಹೇಳಿ, ನೀರು ಈವರೆಗೂ ನೀಡಿಲ್ಲ ಎಂದು ದೇಶಪಾಂಡೆ ಅವರಿಗೆ ಮನವಿ ಮಾಡಿದರು. ಈ ಬಗ್ಗೆ ಕುಡಿಯುವ ನೀರು ಇಲಾಕೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕೂಡಲೇ ಹಾರ್ಲಿ ಗ್ರಾಮಕ್ಕೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು

300x250 AD
Share This
300x250 AD
300x250 AD
300x250 AD
Back to top