Slide
Slide
Slide
previous arrow
next arrow

ಈಡಿಗ ಸಂಘ ಒಗ್ಗಟ್ಟಾದರೆ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ: ರವೀಂದ್ರ ನಾಯ್ಕ

300x250 AD

ಗೋಕರ್ಣ : ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುಸಂಖ್ಯಾತರಾಗಿರುವ ನಾಮಧಾರಿಗಳು ಒಗ್ಗಟ್ಟಾದರೆ ಶಾಸಕ ಹಾಗೂ ಸಂಸದ ಸ್ಥಾನವನ್ನು ಕೂಡ ಸುಲಭವಾಗಿ ಪಡೆದುಕೊಳ್ಳಬಹುದು. ಇದರ ಜತೆಗೆ ಸ್ಥಳೀಯ ಸಂಸ್ಥೆಗಳಲ್ಲಿ ಸಾಕಷ್ಟು ಸ್ಥಾನಗಳನ್ನು ಪಡೆದುಕೊಳ್ಳಬಹುದು. ಆದರೆ ನಮ್ಮಲ್ಲಿನ ಒಗ್ಗಟ್ಟಿನ ಕೊರತೆಯಿಂದಾಗಿ ಅನ್ಯರು ಇದರ ಲಾಭಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಅರಣ್ಯ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಇಲ್ಲಿಯ ನಾಮಧಾರಿ ಸಭಾಭವನದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಹಾಗೂ ರಾಷ್ಟ್ರೀಯ ಈಡಿಗ ಮಹಾಮಂಡಳಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಎರಡು ದಿನಗಳ ವಿಶೇಷ ಚಿಂತನ ಶಿಬಿರ ಉದ್ಘಾಟಿಸಿ, ಅವರು ಮಾತನಾಡಿದರು.

ಈಡಿಗ ರಾಷ್ಟ್ರೀಯ ಮಹಾಮಂಡಳಿಯ ಜಿಲ್ಲಾಧ್ಯಕ್ಷ ವೀರಭದ್ರ ನಾಯ್ಕ ಮಾತನಾಡಿ, ನಮ್ಮ ಸಮುದಾಯದವರು ಸಂಘಟಿತರಾದರೆ ಶಾಸಕರನ್ನು ಸುಲಭವಾಗಿ ಆಯ್ಕೆ ಮಾಡಬಹುದು ಎನ್ನುವುದಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರವೇ ಸಾಕ್ಷಿಯಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ನಮ್ಮವರು ನಮ್ಮವರಿಗಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಣವಾನಂದ ಸ್ವಾಮೀಗಳು ಹಮ್ಮಿಕೊಂಡಿರುವ ಕಾರ್ಯ ಶ್ಲಾಘನೀಯವಾದುದು ಎಂದರು.

300x250 AD

ಈ ಸಂದರ್ಭದಲ್ಲಿ ರಾಷ್ಟ್ರೀಯ ಈಡಿಗ ಮಹಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕೊಂಡಳ್ಳಿ, ಪ್ರಮುಖರಾದ ಆನಂದಪ್ಪ, ಸಂತೋಷಕುಮಾರ, ಡಾ. ಸದಾನಂದ, ಬಿ.ಎಲ್.ರಾಹುಲ, ಅನಿತಾ ಕೃಷ್ಣಮೂರ್ತಿ, ಮಂಚೇಗೌಡ, ಆಶಾ ಎನ್. ನಾಯ್ಕ, ಗುರುರಾಜ, ಜನಾರ್ಧನ ಬಿ.ಕೆ, ರಾಘವೇಂದ್ರ ನಾಯ್ಕ, ಡಿ.ಜಿ.ನಾಯ್ಕ, ವಸಂತ ನಾಯ್ಕ, ಮಾದೇವ ಎಂ. ನಾಯ್ಕ, ಪರಮೇಶ ಎಸ್. ನಾಯ್ಕ, ವಸಂತ ವಿ. ನಾಯ್ಕ, ಶ್ರೀಪಾದ ಟಿ. ನಾಯ್ಕ, ಲೀಲಾವತಿ ಬಿ. ನಾಯ್ಕ, ಮಂಜುನಾಥ ಕೆ. ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪೂಜಾ ನಾಯ್ಕ ಸಂಗಡಿಗರು ಪ್ರಾರ್ಥಿಸಿದರು. ಸಚಿನ ನಾಯ್ಕ ಸ್ವಾಗತಿಸಿದರು. ರಾಘವೇಂದ್ರ ನಾಯ್ಕ ನಿರ್ವಹಿಸಿದರು. ಈ ಕಾರ್ಯಕ್ರಮಕ್ಕೆ ಮಂಗಳೂರು, ಉಡುಪಿ, ಚಿತ್ರದುರ್ಗ, ಶಿವಮೊಗ್ಗ, ಬೆಂಗಳೂರು, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದರು.

Share This
300x250 AD
300x250 AD
300x250 AD
Back to top