ಸಿದ್ದಾಪುರ: ಪಟ್ಟಣ ಪಂಚಾಯತ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ ಅಭಿಯೋಜನಾ ಇಲಾಖೆ ಹಾಗೂ ಅರಣ್ಯ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಜೀವ ವೈವಿಧ್ಯ ದಿನಾಚರಣೆಯನ್ನು ತಾಲೂಕು ಆಡಳಿತ ಸೌಧದ ಆವರಣದಲ್ಲಿ ಸೋಮವಾರ ಆಚರಿಸಲಾಯಿತು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಸಸಿ ನೆಡುವ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ತಿಮ್ಮಯ್ಯ ಜಿ. ಅವರು ಗಿಡ ನೆಡುವುದರ ಮೂಲಕ ಉದ್ಘಾಟಿಸಿ, ಎಲ್ಲರಿಗೂ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯತ ಆಡಳಿತಾಧಿಕಾರಿಯಾದ ಮಂಜುನಾಥ ಮುನ್ನೊಳ್ಳಿ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಐ.ಜಿ ಕೊಣ್ಣೂರ, ಉಪವಲಯ ಅರಣ್ಯಾಧಿಕಾರಿ ಮಂಜುನಾಥ ಚಿನ್ನಣ್ಣವರ, ಪತ್ರಕರ್ತ ಶಿವಶಂಕರ ಕೋಲಸಿರ್ಸಿ, ಸ್ವ-ಸಹಾಯ ಸಂಘದ ಸದಸ್ಯರು ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯವಾಗಿ ಸಾರ್ವಜನಿಕರಿಂದ 55 ಕೆ.ಜಿ ಮರುಬಳಕೆ ಬಟ್ಟೆಗಳನ್ನು ಸಂಗ್ರಹಿಸಲಾಗಿದ್ದು, ಸ್ವ ಸಹಾಯ ಸಂಘದ ಸದಸ್ಯರು ಮ್ಯಾಟ್, ಕೈಚೀಲ,ದುಪ್ಪಟಿ ತಯಾರಿಸಿ ಮುಗದೂರಿನಲ್ಲಿರುವ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಇವರಿಗೆ ಹಸ್ತಾಂತರಿಸಲಾಯಿತು.