ಬೆಂಗಳೂರು: ರಾಜ್ಯದಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಆರು ತಿಂಗಳಿಗೊಮ್ಮೆ ನಿಗದಿತ ದಿನದಂದು ಟಿಇಟಿ ಪರೀಕ್ಷೆ ನಡೆಸಲಾಗುವುದು. ಇದರಿಂದ ಹೆಚ್ಚಿನ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆಯೂ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಸೆಪ್ಟೆಂಬರ್ 5 ರಂದು ಕೌನ್ಸೆಲಿಂಗ್ ಆರಂಭವಾಗಲಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಗೊಂದಲಗಳಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ನುಡಿದಿದ್ದಾರೆ. ಸುಮಾರು 30 -40 ಸಾವಿರ ಶಿಕ್ಷಕರು ವರ್ಗಾವಣೆಯಾಗಲಿದ್ದು, ಅವರು ಇಚ್ಚಿಸುವ ಸ್ಥಳಗಳಿಗೇ ವರ್ಗ ಮಾಡುವುದಾಗಿ ತಿಳಿಸಿದ್ದಾರೆ.