ಕಾರವಾರ: 2023-24 ನೇ ಸಾಲಿನಲ್ಲಿ 2 ವರ್ಷಗಳ ಐ.ಟಿ.ಐ/ದ್ವಿತೀಯ ಪಿ.ಯು.ಸಿ (ವಿಜ್ಞಾನ)/ದ್ವಿತೀಯ ಪಿ.ಯು.ಸಿ ( ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2 ನೇ ವರ್ಷ, 3ನೇ ಸೆಮಿಸ್ಟರ್ ಡಿಪ್ಲೋಮಾ ಕೊರ್ಸುಗಳಿಗೆ ಆಫ್-ಲೈನ್ ಮೂಲಕ ಡಿಪ್ಲೋಮಾ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಅರ್ಜಿಯನ್ನು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಕಾರವಾರ ಇವರಿಂದ ಪಡೆದು ಜೂನ್ 29 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಕಾಲೇಜಿನ ಸೂಚನೆ ಫಲಕಗಳಲ್ಲಿ ಹಾಕಲಾಗುವುದು ಆಯ್ಕೆಯಾದ ಅಭ್ಯರ್ಥಿಗಳು ಜೂನ್ 24ರೊಳಗಾಗಿ ಪ್ರವೇಶ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: Tel:+9108382226343, Tel:+919448995682ಗೆ ಸಂಪರ್ಕಿಸಿ ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.