ಶಿರಸಿ : ಇದೇ ಪ್ರಪ್ರಥಮ ಬಾರಿಗೆ ತಾಲೂಕಿನ ಬನವಾಸಿಯಲ್ಲಿ ಜೂ.08, ಗುರುವಾರದಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮ ಜಾಗೃತಿ ಸಮಾರಂಭ ಆಯೋಜಿಸಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಬನವಾಸಿ ಶಿರಸಿ ರಸ್ತೆಯಲ್ಲಿರುವ ಬಯಲು ಬಸವಣ್ಣ ದೇವಸ್ಥಾನದಿಂದ ಮಧುಕೇಶ್ವರ ದೇವಸ್ಥಾನದವರೆಗೆ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯಲಿದೆ.
ಬೆಳಿಗ್ಗೆ 11-30 ರಿಂದ ರಂಭಾಪುರಿ ಶ್ರೀಗಳ ಸಾನಿಧ್ಯದಲ್ಲಿ ಧರ್ಮ ಜಾಗೃತಿ ಸಭೆ ನಡೆಯಲಿದ್ದು ಬನವಾಸಿ ಹೊಳೆಮಠದ ನಾಗಭೂಷಣ ಸ್ವಾಮಿಗಳು ನೇತೃತ್ವ ವಹಿಸಲಿದ್ದಾರೆ. ಕಣ್ವಕುಪ್ಪೆ ಗವಿಮಠದ ಡಾ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯರು ಹಾಗೂ ದುಗ್ಲಿ-ಕಡೇನಂದಿಹಳ್ಳಿ ಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು ಸಮ್ಮುಖ ವಹಿಸುವರು.
ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯರು, ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮಿಗಳು, ಶಾಂತಪೂರ ಹಿರೇಮಠದ ಶಿವಾನಂದ ಶಿವಾಚಾರ್ಯರು, ಜಡೆ ಹಿರೇಮಠದ ಘನಬಸವ ಶಿವಾಚಾರ್ಯರು, ಶಿರಸಿ ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮಿಗಳು, ಹಾರನಹಳ್ಳಿ ರಾಮಲಿಂಗೇಶ್ವರ ಮಠದ ಶಿವಯೋಗಿ ಶಿವಾಚಾರ್ಯರು, ಚನ್ನಗಿರಿ ಹಿರೇಮಠದ ಕೇದಾರ ಶಿವಶಾಂತವೀರ ಶಿವಾಚಾರ್ಯರು ನುಡಿ ನಮನ ಸಲ್ಲಿಸುವರು ಎಂದು ಬನವಾಸಿ ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.