• Slide
    Slide
    Slide
    previous arrow
    next arrow
  • ವೈಜ್ಞಾನಿಕ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

    300x250 AD

    ಕಾರವಾರ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಲ್ಲಾ ಪಂಚಾಯತಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ 2022- 23ನೇ ಸಾಲಿನಲ್ಲಿ ಪದವಿಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ವಿವಿಧ ವಿಜ್ಞಾನ ಚಟುವಟಿಕೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

    ಬಹುಮಾನ ವಿತರಣಾ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಸತೀಶ ಪವಾರ ಆಗಮಿಸಿ, ಹೊಸ ತಂತ್ರಜ್ಞಾನದಿಂದ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳುವುದು ಇದು ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಯಾಗಿದೆ ಎಂದು ತಿಳಿಸಿದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸತೀಶ ನಾಯ್ಕ ಮುಖ್ಯ ಅತಿಥಿಗಳಾಗಿ ಆಗಮಿಸಿ, ವೈಜ್ಞಾನಿಕ ಮನೋಭಾವ ಬೆಳೆಸಲು ಇಂತಹ ಸ್ಪರ್ಧೆಗಳು ಸ್ಪೂರ್ತಿದಾಯಕ ಹಾಗೂ ಮೂಲ ವಿಜ್ಞಾನದಕಡೆಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಸಕ್ತಿಯನ್ನು ಮೂಡಿಸಬೇಕು ಎಂದು ಹೇಳಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತೇಶ ನಾಯಕ ಮಾತನಾಡಿ, ಮುಂದಿನ ದಿನಗಳಲ್ಲಿ ವಿಜ್ಞಾನದ ಚಟುವಟಿಕೆಗಳು ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜ್ಞಾನದ ಬಗ್ಗೆ ಕುತೂಹಲವನ್ನು ಬೆಳೆಸುವಂತೆ ಆಗಬೇಕು ಎಂದು ಹೇಳಿದರು. ಉಪನಿರ್ದೆಶಕರ ಕಛೇರಿಯ ಡಿವೈಪಿಸಿ ನಾಗರಾಜ ಗೌಡ ಅತಿಥಿಗಳಾಗಿ ಆಗಮಿಸಿದ್ದರು.

    300x250 AD

    ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಪುನೀತ ಉಪಗ್ರಹ ಕಾರ್ಯಕ್ರಮದ ಪ್ರಯುಕ್ತ ಜಿಲ್ಲೆಯ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಹಾಗೂ ಭಿತ್ತಿಪತ್ರ ತಯಾರಿಕಾ ಸ್ಪರ್ಧೆಗಳನ್ನು ಆಯೋಜಿಸಿದ್ದು, 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿದ್ದಾರೆ. ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಶೈಕ್ಷಣಿಕ ಜಿಲ್ಲಾವಾರು ಆಯೋಜಿಸಿದ್ದು, 6 ವಿದ್ಯಾರ್ಥಿಗಳು ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿದ್ದಾರೆ. ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಒಬ್ಬ ವಿದ್ಯಾರ್ಥಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

    ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಗಣಿತ ಹಾಗೂ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡ ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ.ಸಂಜೀವ ದೇಶಪಾಂಡೆ ಕಾರ್ಯಕ್ರಮದಲ್ಲಿ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಜಿಲ್ಲಾ ಪಂಚಾಯತಿ ಎನ್‌ಆರ್‌ಡಿಎಮ್‌ಎಸ್ ತಾಂತ್ರಿಕ ಅಧಿಕಾರಿ ಅನಿಲ ನಾಯಕ ಕಾರ್ಯಕ್ರಮದ ಉಸ್ತುವಾರಿ ವಹಿಸಿ ಪ್ರಸ್ತಾವಿಕ ಮಾತನ್ನಾಡಿದರು. ಚೆಂಡಿಯಾದ ದಿ ಪೊಪ್ಯೂಲರ್ ನ್ಯೂ ಇಂಗ್ಲಿಷ್ ಸ್ಕೂಲ್ ವಿಜ್ಞಾನ ಶಿಕ್ಷಕ ಹಾಗೂ ಕಾರವಾರ ತಾಲೂಕು ವಿಜ್ಞಾನ ಸಂಘದ ಅಧ್ಯಕ್ಷ ವೀರಭದ್ರಪ್ಪ ಹೆಚ್.ಎಂ. ವಂದಿಸಿದರು. ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಶೈಕ್ಷಣಿಕ ಸಹಾಯಕಿ ಕವಿತಾ ಬಾಡಕರ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ಸೇರಿ ಸುಮಾರು 40 ಜನರು ಭಾಗವಹಿಸಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top