• Slide
    Slide
    Slide
    previous arrow
    next arrow
  • ಪರಿಸರವನ್ನು ಉಳಿಸಿ ಬೆಳೆಸುವ ಕಾಯಕ ಯೋಗಿಗಳಾಗಬೇಕು: ಜಿ.ಕೆ. ಶೇಟ್

    300x250 AD

    ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಾ ವಿದ್ಯಾಲಯದ ಆವರಣದಲ್ಲಿ ಅರಣ್ಯ ಇಲಾಖೆ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಡಿ ವಿಶ್ವ ಪರಿಸರ ದಿನಾಚರಣೆ ಕಾರ‍್ಯಕ್ರಮವನ್ನು ನಡೆಸಲಾಯಿತು.

    ಕಾಲೇಜಿನ ಆವರಣದಲ್ಲಿ ಗಿಡ ನೆಟ್ಟು ಕಾರ‍್ಯಕ್ರಮಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್ ಅವರು ಚಾಲನೆ ನೀಡಿ ಮಾತನಾಡುತ್ತಾ, ನಾವೆಲ್ಲರೂ ನೆಮ್ಮದಿ, ಸಂತೃಪ್ತಿಯ ಜೊತೆಗೆ ಆರೋಗ್ಯವಂತರಿದ್ದೇವೆ ಎಂದರೆ ಅದಕ್ಕೆ ಮೂಲ ಕಾರಣ ನಮ್ಮ ಪರಿಸರ. ನಾವು ನಮ್ಮ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದರ ಜೊತೆಗೆ ಅರಣ್ಯ ಸಂಪತ್ತಿನ ರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಹೆಚ್ಚು ಹೆಚ್ಚು ಗಿಡಗಳನ್ನು ನೆಡುವುದರ ಜೊತೆಗೆ ಅದರ ಸಂರಕ್ಷಣೆಗೂ ಅಷ್ಟೇ ಆಸಕ್ತಿ ವಹಿಸಿ ಸಮೃದ್ದ ಪರಿಸರವನ್ನು ಉಳಿಸಿ ಬೆಳೆಸುವ ಕಾಯಕಯೋಗಿಗಳು ನಾವಾಗಬೇಕೆಂದು ಕರೆ ನೀಡಿದರು.

    ಮುಖ್ಯ ಅತಿಥಿಗಳಾಗಿ ವಲಯಾರಣ್ಯಾಧಿಕಾರಿ ಅಪ್ಪರಾವ್ ಕಲಶೆಟ್ಟಿಯವರು ಭಾಗವಹಿಸಿ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಅತಿಥಿಗಳಾಗಿ ಉಪ ವಲಯಾರಣ್ಯಾಧಿಕಾರಿಗಳಾದ ಮಾರಾ ನಾಯಕ, ಲೋಕೇಶ್.ಕೆ.ಎನ್ ಅವರುಗಳು ಭಾಗವಹಿಸಿ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಉಪನ್ಯಾಸ ನೀಡಿದರು.

    300x250 AD

    ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ.ಎಂ.ಡಿ.ಒಕ್ಕುಂದ ಅವರು ವಹಿಸಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ರಾಯಭಾರಿಗಳು ಇದ್ದಂತೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕಡೆಗೆ ವಿಶೇಷ ಒತ್ತು ನೀಡಬೇಕೆಂದರು.

    ಕಾರ್ಯಕ್ರಮದ ಕೊನೆಯಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಾಕ್ಷ್ಯ ಚಿತ್ರವನ್ನು ಪ್ರದರ್ಶನ ಮಾಡಲಾಯಿತು. ವಿದ್ಯಾರ್ಥಿ ಕಾವ್ಯ ಭಟ್ ಪ್ರಾರ್ಥಿಸಿದರು, ಪ್ರಾಧ್ಯಾಪಕ ಡಾ. ಮಂಜುನಾಥ ಚಲವಾದಿ ನಿರೂಪಿಸಿದರು, ಇರ್ಫಾನ್ ಜಕಾತಿ ವಂದಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top