ಕಾರವಾರ:ಈ ವರ್ಷದ ನೈಋತ್ಯ ಮುಂಗಾರು ಕೇರಳಕ್ಕೆ ಗುರುವಾರ ಪ್ರವೇಶಿಸುವ ಮೂಲಕ ದೇಶಕ್ಕೆ ಆಗಮನವಾಗಿದ್ದು, ವಾಡಿಕೆಯ ರೂಢಿಗಿಂತ ಒಂದು ವಾರ ತಡವಾಗಿ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
‘ಬೈಪರ್‌ಜೋಯ್’ ಚಂಡಮಾರುತ ಮಾನ್ಸೂನ್‌ನ ತೀವ್ರತೆಯ ಮೇಲೆ ಪರಿಣಾಮ ಬೀರುತ್ತಿದ್ದು, ಕೇರಳದ ಮೇಲೆ ಅದರ ಆಕ್ರಮಣವು ಸೌಮ್ಯ ರೀತಿಯಿಂದಿರುತ್ತದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ದಕ್ಷಿಣ ಅರೇಬಿಯನ್ ಸಮುದ್ರದ ಉಳಿದ ಭಾಗಗಳು ಮತ್ತು ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಸಂಪೂರ್ಣ ಲಕ್ಷದ್ವೀಪ ಪ್ರದೇಶಗಳು, ಕೇರಳದ ಹೆಚ್ಚಿನ ಭಾಗಗಳು, ದಕ್ಷಿಣ ತಮಿಳುನಾಡಿನ ಹೆಚ್ಚಿನ ಭಾಗಗಳು, ಕೊಮೊರಿನ್ ಪ್ರದೇಶದ ಉಳಿದ ಭಾಗಗಳು, ಮನ್ನಾರ್ ಕೊಲ್ಲಿ ಮತ್ತು ಇನ್ನೂ ಕೆಲವು ಭಾಗಗಳಲ್ಲಿ ನೈಋತ್ಯ, ಮಧ್ಯ ಮತ್ತು ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ತನ್ನ ಪ್ರಭಾವವನ್ನು ಬೀರಿದೆ.