• Slide
    Slide
    Slide
    previous arrow
    next arrow
  • ಆರ್‌ಎಸ್‌ಎಸ್ ಸಿದ್ಧಾಂತಗಳಿಗೆ ಯಾವುದೇ ಇಲಾಖೆಯಲ್ಲಿ ಪ್ರವೇಶವಿಲ್ಲ: ಬಿ.ಕೆ.ಹರಿಪ್ರಸಾದ

    300x250 AD

    ಶಿವಮೊಗ್ಗ: ಆರ್‌ಎಸ್‌ಎಸ್ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದವರ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸೇರಿದಂತೆ ಸರ್ಕಾರದ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳು ನುಸುಳಲು ಅವಕಾಶ ನೀಡುವುದಿಲ್ಲ. ಹೆಡಗೇವಾರ್ ತರಹದ ರಣಹೇಡಿಗಳ ವಿಚಾರ ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ ಎಂದರು.
    ಹೆಡಗೇವಾರ್ ಒಬ್ಬ ಸ್ವಾತಂತ್ರ‍್ಯ ಹೋರಾಟಗಾರ ಎಂಬುದನ್ನು ಬಿಜೆಪಿಯವರು ಸಾಬೀತು ಮಾಡಲಿ. ಬ್ರಿಟಿಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ‍್ಯ ಹೋರಾಟಗಾರರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ. ಅವರೆಲ್ಲ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ನೀಡಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

    300x250 AD

    ಬಿಜೆಪಿ ಅವಧಿಯಲ್ಲಿ ಕೃಷಿ, ಕಾರ್ಮಿಕ, ಶಿಕ್ಷಣ ಇಲಾಖೆಗಳನ್ನು ಸಂಪೂರ್ಣವಾಗಿ ಕೇಸರೀಕರಣ ಮಾಡಲು ಬಿಜೆಪಿ ಹೊರಟಿತ್ತು. ಎಲ್ಲೆಲ್ಲಿ ಸಂಘ ಪರಿವಾರದ ತತ್ವ ಸಿದ್ಧಾಂತಗಳನ್ನು ತುರುಕಲು ಹೊರಟಿದ್ದರೋ ಅದನ್ನೆಲ್ಲಾ ಸರಿಪಡಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ತಿಳಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top