• Slide
  Slide
  Slide
  previous arrow
  next arrow
 • ವಿಶ್ವ ಸಾಗರ ದಿನಾಚರಣೆ: ಟ್ಯಾಗೋರ್ ಕಡಲತೀರದಲ್ಲಿ ಸ್ವಚ್ಛತೆ

  300x250 AD

  ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಅರಣ್ಯ ಇಲಾಖೆ, ವಲಯ ಕೋಸ್ಟಲ್ & ಮರೈನ್ ಇಕೋ ಸಿಸ್ಟಮ್ ಘಟಕ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಹಾಗೂ ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲ್ಲಿ ವಿಶ್ವ ಸಾಗರ ದಿನಾಚರಣೆ ಅಂಗವಾಗಿ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

  ನಂತರ ‘ಸಮುದ್ರ ಜೀವಿಗಳ ಮೇಲೆ ಪ್ಲಾಸ್ಟಿಕ್ ಮಾಲಿನ್ಯದ ಪರಿಣಾಮ’ ಎಂಬ ವಿಷಯದ ಮೇಲೆ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.
  ಕಾಂಡ್ಲಾ ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಯೇಶ ಕೆ.ಸಿ., ಹವಾಮಾನ ವೈಪರಿತ್ಯಕ್ಕೆ ಸಮುದ್ರದ ಸಂರಕ್ಷಣೆ ಪ್ರಮುಖ ಪಾತ್ರವಹಿಸುತ್ತದೆ. ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು ಎಂದು ತಿಳಿಸಿದರು. ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ.ಸಂಜೀವ ದೇಶಪಾಂಡೆ ಹಾಗೂ ಯುನಿಟಿ ಪ್ರೌಢಶಾಲೆ ಶಿಕ್ಷಕಿ ಮಂಜುಳಾ ಉಪಸ್ಥಿತರಿದ್ದರು.

  300x250 AD

  ಸಂಪನ್ಮೂಲ ವ್ಯಕ್ತಿಗಳಾಗಿ ಸಾಗರ ವಿಜ್ಞಾನ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ.ವಿ.ಎನ್.ನಾಯಕ, ಸಾಗರ ಜೀವವೈವಿಧ್ಯತೆ ಹಾಗೂ ಅವುಗಳ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕೋಸ್ಟಲ್ & ಮರೈನ್ ಇಕೋಸಿಸ್ಟಮ್ ಘಟಕದ ವಲಯ ಅರಣ್ಯಾಧಿಕಾರಿ ಪ್ರಮೋದ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ಉಪವಲಯ ಅರಣ್ಯಾಧಿಕಾರಿ ಚಂದ್ರಶೇಖರ ಕಾರ್ಯಕ್ರಮವನ್ನು ನಿರೂಪಿಸಿದರು. ಗಸ್ತು ಅರಣ್ಯಾಧಿಕಾರಿ ಹನುಮಂತ ವಂದಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top