Slide
Slide
Slide
previous arrow
next arrow

SSLC ಮರು ಮೌಲ್ಯಮಾಪನ: ಸಿದ್ಧಾರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ

300x250 AD

ಭಟ್ಕಳ: ಸಿದ್ಧಾರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಓರ್ವ ವಿದ್ಯಾರ್ಥಿಯ ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಗೊಂಡಿದ್ದು, ಆ ಮೂಲಕ ಶಾಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶ 100% ದಾಖಲಿಸಿದೆ. 
2023ರ ವಾರ್ಷಿಕ ಪರೀಕ್ಷೆಯಲ್ಲಿ 32 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣ ಎಂದು ಫಲಿತಾಂಶ ಪ್ರಕಟವಾಗಿತ್ತು. ಈಗ ಮರುಮೌಲ್ಯಮಾಪನದಲ್ಲಿ ಆ ವಿದ್ಯಾರ್ಥಿ ಉತ್ತೀರ್ಣನಾಗಿದ್ದು, ಸತತ ಮೂರು ವರ್ಷಗಳಿಂದ ಶಾಲೆಯು 100% ಫಲಿತಾಂಶ ಸಾಧಿಸಿ ಹ್ಯಾಟ್ರಿಕ್ ಆಗಿದೆ.

2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಮೇ 8ಕ್ಕೆ ಪ್ರಕಟವಾಗಿತ್ತು. ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಮರುಮೌಲ್ಯಮಾಪನದಲ್ಲಿ ಶೇಕಡಾ 100ರಷ್ಟು ಫಲಿತಾಂಶ ದಾಖಲಾಗಿದೆ. ಪರಿಷ್ಕೃತ ಅಂಕದಲ್ಲಿ ಸಂಜನಾ ನಾಯ್ಕ 625 ಅಂಕಗಳಿಗೆ 616 ಅಂಕ (98.56) ಪಡೆದು ಪ್ರಥಮ ಸ್ಥಾನ ಪಡೆದಿದ್ದಾಳೆ. ಯಶವಂತ ನಾಯ್ಕ 625ಕ್ಕೆ 606 (96.96) ಅಂಕ ಪಡೆದು ದ್ವಿತೀಯ ಹಾಗೂ ಕುಮಾರಿ ತನ್ವಿ ದೇವಡಿಗ ಮರು ಮೌಲ್ಯಮಾಪನದಲ್ಲಿ 625ಕ್ಕೆ 603 (96.48) ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾಳೆ.

300x250 AD

11 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ ಹಾಗೂ 16 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕನ್ನಡ ವಿಷಯದಲ್ಲಿ 3 ವಿದ್ಯಾರ್ಥಿಗಳು, ಗಣಿತ ಹಾಗೂ ಹಿಂದಿ ವಿಷಯದಲ್ಲಿ ತಲಾ 1 ವಿದ್ಯಾರ್ಥಿ 100ಕ್ಕೆ 100 ಅಂಕ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಫಲಿತಾಂಶ ನೀಡುವುದಕ್ಕೆ ಶ್ರಮಿಸಿದ ಎಲ್ಲರಿಗೂ ಸಂಸ್ಥೆಯ ಅಧ್ಯಕ್ಷೆ ಅರ್ಚನಾ ಯು. ಮತ್ತು ಆಡಳಿತ ಮಂಡಳಿಯ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Share This
300x250 AD
300x250 AD
300x250 AD
Back to top