ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿವಮೊಗ್ಗದ ತರಬೇತುದಾರ ಧ್ರುವ ಅಪ್ಪು ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಶಿಬಿರವನ್ನು ನಡೆಸಿಕೊಟ್ಟರು.
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಡೆದ ಶಿಬಿರದಲ್ಲಿ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಲು ವಿಫಲ ಅವಕಾಶವಿದೆ. ಈ ಹಂತದಲ್ಲಿ ನಡೆಯುವ ಪರೀಕ್ಷೆ ಎದುರಿಸಲು ಆರಂಭದಿಂದಲೂ ಸಜ್ಜಾಗಬೇಕು. ಶೈಕ್ಷಣಿಕ ಪಠ್ಯದ ಜೊತೆ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯವನ್ನು ಅಧ್ಯಯನ ಮಾಡುವಂತೆ ಸಲಹೆ ನೀಡಿದರು.
ಶಾಲೆಯ ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರೇರಣಾ ಶಿಬಿರದ ವಿವಿಧ ಚಟುವಟಿಕೆಯಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಆಡಳಿತಾಧಿಕಾರಿ ಎಂ.ಎ¸.ಹೆಗಡೆ ಗುಣವಂತೆ, ಮುಖ್ಯ ಶಿಕ್ಷಕಿ ವೈಲೆಟ್ ಫರ್ನಾಂಡಿಸ್ ಹಾಗೂ ಶಿಕ್ಷಕ- ಶಿಕ್ಷಕಿಯರು ಉಪಸ್ಥಿತರಿದ್ದರು. ಶಿಕ್ಷಕಿ ರೇಷ್ಮಾ ಜೊಗಳೇಕರ್ ಸ್ವಾಗತಿಸಿ ವಂದಿಸಿದರು.