• Slide
    Slide
    Slide
    previous arrow
    next arrow
  • SSLC ಪೂರಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್

    300x250 AD

    ಕಾರವಾರ: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗಳು ಜೂ 12 ರಿಂದ 19 ರ ವರೆಗೆ ನಡೆಯಲಿದ್ದು, ವಾಕರಸಾ ಸಂಸ್ಥೆಯು ಧಾರವಾಡ, ಕಾರವಾರ, ಬಾಗಲಕೋಟೆ, ಹಾವೇರಿ ಬೆಳಗಾವಿ ಮತ್ತು ಗದಗ ಭಾಗಗಳಲ್ಲಿ ಪರೀಕ್ಷೆಗಳಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ನಿರ್ವಾಹಕರಿಗೆ ಬಸ್ ಪಾಸ್ ಅಥವಾ ಎಸ್. ಎಸ್.ಎಲ್.ಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್ ) ತೋರಿಸಿ, ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಹಿಂದಿರುಗಿ ಬರಲು ಉಚಿತ ಪ್ರಯಾಣ ಮಾಡಬಹುದಾಗಿದೆ. ಸಂಸ್ಥೆಯ ನಗರ, ಉಪನಗರ , ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ವಾಕರಸಾ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top