ಶಿರಸಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ಸೂರ್ಯ ನಾರಾಯಣ ಪ್ರೌಢಶಾಲೆ ಬಿಸಲಕೊಪ್ಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲಿಗೆ ಹಣ್ಣಿನ ಗಿಡಗಳನ್ನು ನೆಟ್ಟು ಅದನ್ನು ಬೆಳೆಸುವ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಯಿತು.
ನಂತರ ನಡೆದ ಸಭಾಕಾರ್ಯಕ್ರಮವನ್ಮು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಘವೇಂದ್ರ ನಾಯ್ಕ ಉದ್ಘಾಟಿಸಿ, ಮಾತನಾಡಿ ಗಿಡಗಳನ್ನು ನೆಟ್ಟು ಪರಿಸರಕ್ಕೆ ನಮ್ಮದೇ ಆದ ಕೊಡುಗೆಯನ್ನು ನೀಡೋಣ ಎಂದರು. ಮುಖ್ಯೋಪಾಧ್ಯಾಯ ಗಣೇಶ್ ಭಟ್ ವಾನಳ್ಳಿ ಎಲ್ಲರನ್ನೂ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡುತ್ತಾ ಪರಿಸರದ ಮಹತ್ವವನ್ನು ತಿಳಿಸಿ ಗಿಡಗಳನ್ನು ನೆಡುವುದು ಮಾತ್ರವಲ್ಲ, ಗಿಡಗಳನ್ನು ಪೋಷಿಸುವುದು ಕೂಡ ನಮ್ಮ ಆಧ್ಯ ಜವಾಬ್ದಾರಿಯಾಗಬೇಕು ಎಂದರು. ಬಿಸಲಕೊಪ್ಪ ವಲಯ ಮೇಲ್ವಿಚಾರಕರಾದ ದಿನೇಶ್ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ಹಾಗೂ ಗುರಿ ಮುಟ್ಟಲು ಓದು ಹೇಗಿರಬೇಕೆಂಬ ಬಗ್ಗೆ ತಿಳಿಸಿದರು.
ನಂತರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ಉಪಾಧ್ಯಕ್ಷ ಪ್ರಭಾಕರ್ ಹೆಗಡೆ ಹುಗ್ಗಿ ಕೊಪ್ಪ ಪರಿಸರದ ಮಹತ್ವ ತಿಳಿಸಿದರು. ತದನಂತರ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಕುರಿತು ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಎಸ್ಎಂ ಹೆಗಡೆ ಹುಡೆಲಕೊಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕ ಕೃಷಿ ಮೇಲ್ವಿಚಾರಕ ರಾಮು ವಂದನಾರ್ಪಣೆ ಮಾಡಿದರು. ಶೌರ್ಯ ಟೀಮ್ ನ ದತ್ತ ಗುರು ಹಾಗೂ ಬಿಸಲಕೊಪ್ಪ ಸೇವಾ ಪ್ರತಿನಿಧಿ ಮಹಾಲಕ್ಷ್ಮಿ ಹಾಜರಿದ್ದರು. ಕೊನೆಯಲ್ಲಿ ಮಕ್ಕಳಿಗೆ ಸಿಹಿ ವಿತರಿಸಲಾಯಿತು.