ಶಿರಸಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿ ಭಾರತ ಸೇವಾದಳ ಜಿಲ್ಲಾ ಹಾಗೂ ತಾಲೂಕು ಸಮಿತಿ ಶಿರಸಿ ಶ್ರೀದೇವಿ ಶಿಕ್ಷಣ ಸಂಸ್ಥೆ ಹುಲೇಕಲ್, ಹಿರಿಯ ಪ್ರಾಥಮಿಕ ಶಾಲೆ ಹುಲೇಕಲ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹುಲೇಕಲ್ ಶಾಲಾ ಮೈದಾನದಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.
ಗ್ರಾಮ ಪಂಚಾಯತ ಅಧ್ಯಕ್ಷೆ ಶ್ರೀಮತಿ ತನುಜಾ ನೇತ್ರೇಕರ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಗಜಾನನ ನಾಯ್ಕ, ವಲಯ ಸಂರಕ್ಷಣಾಧಿಕಾರಿ ಶ್ರೀಮತಿ ಉಷಾ ಕಬ್ಬೇರ, ಭಾರತ ಸೇವಾದಳ ಜಿಲ್ಲಾ ಕಾರ್ಯದರ್ಶಿ ಪ್ರೋ. ಕೆ.ಎನ್. ಹೊಸ್ಮನಿ, ತಾಲೂಕಾ ಅಧ್ಯಕ್ಷ ಅಶೋಕ ಭಿ. ಬಜಂತ್ರಿ ಉಪಾಧ್ಯಕ್ಷೆ ವೀಣಾ ಭಟ್ ಸದಸ್ಯೆ ಸಾವಿತ್ರಿ ಭಟ್ ಜಿಲ್ಲಾ ಸಂಘಟಕ ರಾಮಚಂದ್ರ ಹೆಗಡೆ, ಸಿ.ಆರ್.ಪಿ. ಡಿ.ಪಿ. ಹೆಗಡೆ ಮುಖ್ಯ ಶಿಕ್ಷಕಿ ಸುನಂದಾ ಹೆಗಡೆ, ಮುಂತಾದವರು ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಸ್ವಸಹಾಯ ಸಂಘದ ಸದಸ್ಯರು ಶ್ರೀದೇವಿ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗೂ ಮಕ್ಕಳು, ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಹಾಗೂ ಊರ ನಾಗರೀಕರು ಗಿಡ ನೆಡುವ ಮೂಲಕ ವಿದ್ಯುಕ್ತವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. ಸರ್ವಧರ್ಮ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಸುನಂದಾ ಹೆಗಡೆ ಸ್ವಾಗತಿಸಿದರೆ ಜಿಲ್ಲಾ ಸಂಘಟಕ ರಾಮಚಂದ್ರ ಹೆಗಡೆ ಪ್ರಾಸ್ತಾವಿಕ ನುಡಿದು ನಿರೂಪಿಸಿದರು. ಶಾಖಾ ನಾಯಕಿ ಕಲಾವತಿ ಹೆಗಡೆ ವಂದಿಸಿದರು.