ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಸರ್ಕಾರಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು -ಸ್ವಸಹಾಯ ಸಂಘ ಇವರಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು.
ಗ್ರಾಪಂ ಉಪಾಧ್ಯಕ್ಷ ವಿನಾಯಕ ಕೆ.ಆರ್. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪ್ರೌಢಶಾಲಾ ಆವರಣದಲ್ಲಿ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರದ ಮಹತ್ವದ ಕುರಿತು ಮಾತನಾಡಿದರು. ಪ್ರೌಢಶಾಲಾ ವಿಜ್ಞಾನ ಶಿಕ್ಷಕಿ ರಶ್ಮಿ ಹೆಗಡೆ,ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹೆಗಡೆ ಹಾರ್ಸಿಮನೆ, ಗ್ರಾಪಂ ಪಿಡಿಒ ಸುಬ್ರಹ್ಮಣ್ಯ ಹೆಗಡೆ, ನಿಡಗೋಡ ಉಪವಲಯ ಅರಣ್ಯಾಧಿಕಾರಿ ವಿನಾಯಕ ಎಂ. ಇವರು ಪರಿಸರದ ಮಹತ್ವದ ಕುರಿತು ಮಾಹಿತಿ ನೀಡಿದರು.
ಪ್ರೌಢಶಾಲಾ ಮುಖ್ಯಾಧ್ಯಾಪಕಿ ರಾಜಶ್ರೀ ಪೈ, ಗ್ರಾಪಂ ಕಾರ್ಯದರ್ಶಿ ಪ್ರವೀಣ ಹೆಗಡೆ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರಭಾಕರ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಮೇಲ್ವಿಚಾರಕ ಪ್ರದೀಪ ಸ್ವಾಗತಿಸಿದರು. ಶಿಕ್ಷಕ ವಿ.ಡಿ.ನಾಯ್ಕ ವಂದಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಮಹಾದೇವ ಕಾರ್ಯಕ್ರಮ ನಿರ್ವಹಿಸಿದರು.