ಶಿರಸಿ: ತಾಲೂಕಿನ ಅಂಡಗಿ ಬಸವೇಶ್ವರ ಪ್ರೌಢಶಾಲೆಯಲ್ಲಿ 2022-23ನೇ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳನ್ನ ಪಡೆದ ಮೂರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪುರಸ್ಕರಿಸಲಾಯಿತು.
ಪ್ರಸಕ್ತ ಸಾಲಿನಲ್ಲಿ ಅತ್ಯಂತ ಹೆಚ್ಚು ಅಂಕಗಳನ್ನು ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಕ್ಕಾಗಿ ಈ ಮಕ್ಕಳನ್ನು ಸನ್ಮಾನಿಸಲಾಯಿತು. ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾದ ನವ್ಯಾ ಡಿ.ನಾಯ್ಕ ಶೇಕಡಾ 93.28 ಹಾಗೂ ಎರಡನೇ ಸ್ಥಾನದಲ್ಲಿ ತೇರ್ಗಡೆಯಾದ ವರ್ಷಾ ಆರ್.ಗೌಡ ಶೇಕಡಾ 88 ಹಾಗೂ ಮೂರನೇ ಸ್ಥಾನದಲ್ಲಿ ತೇರ್ಗಡೆಯಾದ ಅಕ್ಷತಾ ಜಿ.ಗೌಡ ಶೇಕಡಾ 87.36 ಪಡೆದು ಶಾಲೆಗೆ ಕಿರ್ತಿ ತಂದಿದ್ದರು.
ಸಂಸ್ಥೆಯ ಅಧ್ಯಕ್ಷ ಸಿ.ಎಫ್.ನಾಯ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಸವರಾಜ ದೊಡ್ಮನಿ ಮಾತನಾಡಿ, ಈ ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಯಾವುದೇ ಶಾಲೆಯಲ್ಲಿ ಕಲಿತರು ತಾವು ಒಳ್ಳೆಯ ಗುರಿಯೊಂದಿಗೆ ಸಾಧನೆ ಮಾಡಿ ತಮಗೆ ಶುಭವಾಗಲಿ ಎಂದು ಹೇಳಿದರು.
ಶಾಲಾ ಆಡಳಿತ ಮಂಡಳಿ ಹಾಗೂ ಗಣ್ಯರು ಮಕ್ಕಳಿಗೆ ಶಾಲು ಹಾಕಿ ಗೌರವಧನವನ್ನು ನೀಡಿದರು. ವಿದ್ಯಾರ್ಥಿಗಳ ಪಾಲಕರಿಗೂ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜ, ಸದಸ್ಯರಾದ ಮಂಜುನಾಥ ನಾಯ್ಕ, ಸುದರ್ಶನ ನಾಯ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯೋಜಕರಾದ ರಾಘವೇಂದ್ರ, ಮುಖ್ಯಾಧ್ಯಾಪಕರಾದ ಬಿ.ಎನ್.ನಾಯ್ಕ, ಶಿಕ್ಷಕರಾದ ಎಂ.ಜಿ.ತಲಗುಂದ, ಮಂಜಪ್ಪ, ಸಿದ್ದಪ್ಪ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.