Slide
Slide
Slide
previous arrow
next arrow

ಅರಣ್ಯವಾಸಿಗಳ ಸಮಸ್ಯೆ ಬಗೆಹರಿಸುವಲ್ಲಿ ಕಾಂಗ್ರೆಸ್ ಸರಕಾರ ಬದ್ಧವಾಗಿದೆ: ಸಚಿವ ವೈದ್ಯ

300x250 AD

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ಕಾಂಗ್ರೆಸ್ ಸರಕಾರ ಬದ್ಧವಾಗಿದೆ ಅಲ್ಲದೇ, ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ಸರಕಾರ ಗಂಭೀರವಾಗಿ ಪರಿಗಣಿಸುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಹೇಳಿದರು.

 ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ವಿಧಾನಸೌಧ ಬೆಂಗಳೂರಿನ ಸಚಿವರ ಕಾರ್ಯಾಲಯದಲ್ಲಿ ಭೇಟ್ಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳ ಮನವಿಯನ್ನು ನೀಡಿದ ಸಂದರ್ಭದಲ್ಲಿ ಅವರು ಮೇಲಿನಂತೆ ಹೇಳಿದರು.

 ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದ ವೈಫಲ್ಯತೆಯಿಂದ ಜಿಲ್ಲೆಯಲ್ಲಿ 69733 ಅರ್ಜಿ ತಿರಸ್ಕಾರದೊಂದಿಗೆ, ಶೇ. 78.20ರಷ್ಟು ತಿರಸ್ಕಾರವಾಗಿದೆ ಎಂದು ಚರ್ಚೆಯ ಸಂದರ್ಭದಲ್ಲಿ ರವೀಂದ್ರ ನಾಯ್ಕ ಹೇಳಿದರು.

 ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಜಿಲ್ಲೆಯಲ್ಲಿ ಬುಡಕಟ್ಟು 1331, ಪಾರಂಪರಿಕ ಅರಣ್ಯವಾಸಿಗಳಿಗೆ 398 ಹಾಗೂ ಸಮುದಾಯ ಉದ್ದೇಶಕ್ಕೆ 1126 ಒಟ್ಟೂ 2855 ಹೀಗೆ ಶೇಕಡವಾರು ಬಂದಿರುವಂಥ ಗ್ರಾಮೀಣ ಭಾಗದ ಅರ್ಜಿಯಲ್ಲಿ ಶೇ.3.20 ರಷ್ಟು ಮಾತ್ರ ಹಕ್ಕು ಪ್ರಾಪ್ತವಾಗಿದೆ ಎಂದು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

300x250 AD

ಅರಣ್ಯವಾಸಿಗಳೊಂದಿಗೆ ಸಮಾಲೋಚನೆ:
 ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು, ಅರಣ್ಯವಾಸಿಗಳೊಂದಿಗೆ ಮುಕ್ತ ಚರ್ಚೆ ಏರ್ಪಡಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಜರುಗಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಅಧ್ಯಕ್ಷ ರವಿಂದ್ರ ನಾಯ್ಕ ಅವರಿಗೆ ಆಶ್ವಾಸನೆ ನೀಡಿದರು.

 ಈ ಸಂಧರ್ಭದಲ್ಲಿ ಸಹಕಾರಿ ಧುರೀಣ ವಿವೇಕ್ ಭಟ್ಟ ಗಡಿಹಿತ್ಲು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top