ನವದೆಹಲಿ: ಬಿಪೋರ್ಜಾಯ್ ಚಂಡಮಾರುತ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ 8,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿಪತ್ತು ನಿರ್ವಹಣೆಗಾಗಿ ಮೂರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ.
ವಿಪತ್ತು ನಿರ್ವಹಣೆ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಚಿವರ ಜತೆ ಸಭೆ ನಡೆಸಿದ ಮಾತನಾಡಿದ ಅವರು, “ರಾಜ್ಯಗಳಲ್ಲಿ ಅಗ್ನಿಶಾಮಕ ಸೇವೆಗಳನ್ನು ವಿಸ್ತರಿಸಲು ಮತ್ತು ಆಧುನೀಕರಿಸಲು ಒಟ್ಟು ರೂ 5,000 ಕೋಟಿ ಯೋಜನೆ, ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಏಳು ಮಹಾನಗರಗಳಾದ ಮುಂಬೈ, ಚೆನ್ನೈ, ಕೋಲ್ಕತ್ತಾ ಬೆಂಗಳೂರು, ಹೈದರಾಬಾದ್, ಅಹಮದಾಬಾದ್ ಮತ್ತು ಪುಣೆಗೆ ರೂ 2,500 ಕೋ.ರೂ. ಹಣ ಅನುದಾನ ಯೋಜನೆ ಮತ್ತು ನಗರ ಪ್ರವಾಹದ ಅಪಾಯವನ್ನು ಕಡಿಮೆ ಮಾಡಲು ಮತ್ತು ಭೂಕುಸಿತವನ್ನು ತಗ್ಗಿಸಲು 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 825 ಕೋ. ರೂ.ಗಳ ಯೋಜನೆಯನ್ನು ಗೃಹ ಸಚಿವರು ಘೋಷಿಸಿದ್ದಾರೆ.