• Slide
    Slide
    Slide
    previous arrow
    next arrow
  • ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಹಳಿಯಾಳದ ಯುವಕ: ಸುನೀಲ್ ಹೆಗಡೆ ಶ್ಲಾಘನೆ

    300x250 AD

    ದಾಂಡೇಲಿ: ದಕ್ಷಿಣ ಕೋರಿಯಾದಲ್ಲಿ ನಡೆದ ಕಿರಿಯರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಶಿವಾಜಿ.ಪಿ ಮಾದಪ್ಪಗೌಡ ಈತನೂ ಪುರುಷರ 5000 ಮೀ ಓಟದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಳ್ಳುವುದರ ಮೂಲಕ ಹಳಿಯಾಳ ತಾಲ್ಲೂಕಿಗೆ ಗೌರವವನ್ನು ತಂದುಕೊಟ್ಟಿರುವುದಕ್ಕೆ ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಕಾರ‍್ಯಕಾರಿಣಿ ಸದಸ್ಯರಾದ ಸುನೀಲ್ ಹೆಗಡೆ ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿ, ಶಿವಾಜಿಯ ಸಾಧನೆಯನ್ನು ಮುಕ್ತಕಂಠದಿಂದ ಕೊಂಡಾಡಿದ್ದಾರೆ. ಅವರು ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಶಿವಾಜಿ ನಮ್ಮ ಹಳಿಯಾಳ ಹೆಮ್ಮೆ ಮತ್ತು ಗೌರವ. ತಾಲ್ಲೂಕಿನ ಕೀರ್ತಿಯನ್ನು ಬೆಳಗಿಸಿದ ಶಿವಾಜಿಯ ಸಾಧನೆ ವಿಶ್ವಮಟ್ಟದಲ್ಲಿ ವಿಜೃಂಭಿಸುವಂತಾಗಲೆಂದು ಶುಭವನ್ನು ಹಾರೈಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top