Slide
Slide
Slide
previous arrow
next arrow

ನೀಟ್-2023: ಉತ್ತಮ ಸಾಧನೆಗೈದ ಸರಸ್ವತಿ ಪಿಯು ವಿದ್ಯಾರ್ಥಿಗಳು

300x250 AD

ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು NEET – 2023 ರಲ್ಲಿ ಉತ್ತಮ ಗುಣಮಟ್ಟದ ಸಾಧನೆಯನ್ನು ಮಾಡಿ ಸಂಸ್ಥೆಯ ಗರಿಮೆಯನ್ನು ಹೆಚ್ಚಿಸಿದ್ದಾರೆ.

ಕು. ಶ್ರೀನಂದಾ ದಿಂಡೆ ಕಾಲೇಜಿಗೆ ಪ್ರಥಮಳಾಗಿ ಹೊರಹೊಮ್ಮಿದ್ದು ಜೊತೆಗೆ ಕು. ಪ್ರಾಪ್ತಿ ನಾಯಕ್, ಕು. ಸಾತ್ವಿಕ ಭಟ್ಟ, ಕು. ಶ್ರೀಜನಿ ಭಟ್, ಕು. ರಂಜನಾ ಮಡಿವಾಳ, ಕು. ಪ್ರತಿಷ್ಠಾ ಬಿಲ್ಲವ, ಕು. ಶ್ರೇಯಸ್ ಪೈ, ಕು. ರಾಹುಲ ಆರ್ ಶಾನಭಾಗ, ಕು. ಪೂರ್ವ ನಾಯ್ಕ, ಕು. ಸಿಂಧು ಎಮ್., ಕು. ಸ್ನೇಹಾ ಬಿ. ಆರ್. ಇವರುಗಳು ಇತ್ತೀಚಿಗೆ ವೈದ್ಯಕೀಯ ಶಿಕ್ಷಣ ಪದವಿಗಾಗಿ ನಡೆದ ರಾಷ್ಟ್ರ ಮಟ್ಟದ NEET-2023 ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ, ವೈದ್ಯಕೀಯ ಶಿಕ್ಷಣ ಪದವಿಯ ಪ್ರವೇಶಕ್ಕೆ ಅರ್ಹತೆಯನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.

300x250 AD

ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಂಶುಪಾಲ ಕಿರಣ ಭಟ್ ಹಾಗೂ ಉಪನ್ಯಾಸಕ ವರ್ಗದವರು ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷವನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Share This
300x250 AD
300x250 AD
300x250 AD
Back to top