• Slide
    Slide
    Slide
    previous arrow
    next arrow
  • 4 ತಿಂಗಳು ಪ್ರವಾಸಿಗರಿಗೆ ಕಡಲಿಗೆ ನಿರ್ಬಂಧ: ಮುರುಡೇಶ್ವರ ಬೀಚ್ ಬಂದ್

    300x250 AD

    ಭಟ್ಕಳ: ಮುರುಡೇಶ್ವರಕ್ಕೆ ಬರುವ ಪ್ರವಾಸಿಗರ ಹಿತದೃಷ್ಟಿಯಿಂದಾಗಿ ಮುರುಡೇಶ್ವರ ಸಮುದ್ರ ತೀರಕ್ಕೆ ತೆರಳುವ ಎರಡು ಮಾರ್ಗಗಳನ್ನು ಮುಂದಿನ 4 ತಿಂಗಳವರರೆಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದು, ಸಮುದ್ರ ತೀರಕ್ಕೆ ತೆರಳಲು ನಿರ್ಬಂಧ ಹೇರಲಾಗಿದೆ.

    ಕಳೆದ ಎರಡು ದಿನಗಳಲ್ಲಿ ಮುರುಡೇಶ್ವರಕ್ಕೆ ಬಂದ ಇಬ್ಬರು ಪ್ರವಾಸಿಗರು ಇಲ್ಲಿನ ಲೈಫ್ ಗಾರ್ಡ್ಸ್ಗಳ ಮಾತು ಧಿಕ್ಕರಿಸಿ ಸಮುದ್ರಕ್ಕಿಳಿದು ನೀರು ಪಾಲಾಗಿದ್ದಾರೆ. ಮಳೆಗಾಲದ ಅಬ್ಬರದ ಸೈಕ್ಲೋನ್‌ನಿಂದ ಸಮುದ್ರದ ಅಲೆಗಳ ಉಬ್ಬರ ಇಳಿತ ಹೆಚ್ಚಾಗಿರುವ ಹಿನ್ನೆಲೆ ಸಮುದ್ರ ತೀರಕ್ಕೆ ಪ್ರವಾಸಿಗರು ಈಜಲು ಹಾಗೂ ಸಮುದ್ರ ತೀರಕ್ಕೆ ತೆರಳಲು ನಿರ್ಬಂಧ ಹೇರಲಾಗಿದೆ. ಮುರುಡೇಶ್ವರ ಸಮುದ್ರ ತೀರಕ್ಕೆ ತೆರಳುವ ಎರಡು ಮಾರ್ಗಗಳನ್ನು ಬ್ಯಾರಿಕೇಡ್‌ಗಳ ಮೂಲಕ ಬಂದ್ ಮಾಡಲಾಗಿದೆ.
    ವಿಶ್ವ ಪ್ರಸಿದ್ಧ ಮುರುಡೇಶ್ವರಕ್ಕೆ ದಿನ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದು, ದೇವರ ದರ್ಶನ ಮುಗಿಸಿ ಸಮುದ್ರಕ್ಕೆ ಈಜಲು ತೆರಳಲು ಬಂದ ವೇಳೆ ನಮ್ಮ ಲೈಫ್ ಗಾರ್ಡ್ಗಳ ಮಾತು ಕೇಳದೇ ಸಮುದ್ರಕ್ಕೆ ಈಜಲು ತೆರಳಿ ಜೀವ ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಸದ್ಯ ಮಳೆಗಾಲ ಆರಂಭವಾಗಿದ್ದು, ಜಿಲ್ಲೆಗೆ ಸೈಕ್ಲೋನ್ ಕೂಡ ಪ್ರವೇಶವಾಗಿರುವ ಹಿನ್ನೆಲೆಯಲ್ಲಿ ಸಮುದ್ರ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಸಮುದ್ರಕ್ಕೆ ತೆರಳುವ ಎರಡು ಮಾರ್ಗಗಳನ್ನು ಜಿಲ್ಲಾಡಳಿತದ ಆದೇಶದ ಮೇರೆಗೆ ಬಂದ್ ಮಾಡಿದ್ದೇವೆ. ಮುಂದಿನ ನಾಲ್ಕು ತಿಂಗಳು ಸಮುದ್ರ ತೀರಕ್ಕೆ ನಿರ್ಬಂಧ ಹೇರಲಾಗಿದ್ದು, ಅಕ್ಟೋಬರ್ ತಿಂಗಳಿಂದ ಪ್ರವೇಶ ಮಾಡಿಕೊಡಲಾಗುತ್ತದೆ ಎಂದು ಬೀಚ್ ಸೂಪರ್ವೈಸರ್ ದತ್ತಾತ್ರೇಯ ಶೆಟ್ಟಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top