ಕಾರವಾರ: ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು 2023-24ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿಎಂಇಜಿಪಿ) ಯೋಜನೆಯಡಿ ನಗರ ಮತ್ತು ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕಾ ಸೇವಾ ಚಟುವಟಿಕೆ ಸ್ಥಾಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಕನಿಷ್ಠ 8ನೇ ತರಗತಿ ಉತ್ತಿರ್ಣರಾಗಿರಬೇಕು, ಉತ್ಪಾದನಾ ಘಟಕವಾಗಿದ್ದಲ್ಲಿ ರೂ.10 ಲಕ್ಷ ಮತ್ತು ಸೇವಾ ಘಟಕವಾಗಿದ್ದಲ್ಲಿ ರೂ 5 ಲಕ್ಷಗಿಂತ ಮೇಲ್ಪಟ್ಟ ಯೋಜನಾ ವೆಚ್ಚವನ್ನೊಳಗೊಂಡಿದೆ.
ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ತಮ್ಮ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಗ್ರಾಮೀಣ ಪ್ರದೇಶದ ಪ್ರಮಾಣ ಪತ್ರ, ವಿದ್ಯಾಭ್ಯಾಸದ ದಾಖಲಾತಿ, ಬ್ಯಾಂಕ್ ಪಾಸ್ ಪುಸ್ತಕ, ರೇಷನ್ ಕಾರ್ಡ್, ವಾಸ್ತವ್ಯ ದೃಡೀಕರಣ ಪತ್ರ ಹಾಗೂ ಇತರ ದಾಖಲಾತಿಗಳನ್ನು ವೆಬ್‌ಸೈಟ್ http://www.kviconline. gov.in/pmegpeportalನ ಮೂಲಕ ಆಪ್‌ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (ಕೆ.ವಿ.ಐ.ಬಿ.), ನಂ.524ಗೆ ಅಥವಾ ದೂರವಾಣಿ ಸಂಖ್ಯೆ: Tel:+9108382226506, Tel:+919480825632 ಗೆ ಸಂಪರ್ಕಿಸಲು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ