ಕಾರವಾರ: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಕಾಜುಬಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತೀರ್ಮಾನಿಸಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಆಯುಷ್ ಇಲಾಖೆ ಉತ್ತರಕನ್ನಡ, ಸ್ಥಳೀಯ ರೋಟರಿ ಸಂಸ್ಥೆ, ಲಯನ್ಸ ಸಂಸ್ಥೆ, ರೋಟರಿ ಸಿ ಸೈಡ ಸಂಸ್ಥೆ, ಪತಂಜಲಿ ಯೋಗ ಸಂಸ್ಥೆ, ನೆಹರು ಯುವ ಕೇಂದ್ರ , ರೆಡ್ ಕ್ರಾಸ ಸಂಸ್ಥೆ, ಪೋಲಿಸ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ ಕಾರವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪ್ರವಾಸೊದ್ಯಮ ಇಲಾಖೆ ಹಾಗೂ ಮತ್ತಿತರ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ನಡೆಸಲು ತೀರ್ಮಾನಿಸಲಾಯಿತು.
ಜೂ.21ರಂದು ಬೆಳಿಗ್ಗೆ 6-30 ಘಂಟೆಗೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದು, ಕಾರವಾರ ಅಂಕೋಲಾ ಶಾಸಕ ಸತೀಶ ಕೆ ಸೈಲ್ ಅದ್ಯಕ್ಷತೆಯನ್ನು ವಹಿಸುವರು. ಜಿಲ್ಲೆಯ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
9 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂ.19ರಂದು ಬೆಳಿಗ್ಗೆ 10.30 ಘಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿಯವರೆಗೆ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ್‌ಕುಮಾರ ಖಂಡೂ, ಆಯುಷ್ ಅಧಿಕಾರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.