ಶಿರಸಿ: ಕ್ರೀಡೆ ದೈಹಿಕ, ಮಾನಸಿಕ ಸ್ವಾಸ್ಥ್ಯವನ್ನು ಹೆಚ್ಚಿಸಲು ಸಹಕಾರಿ. ಕ್ರೀಡೆಯಲ್ಲಿ ಸೋಲು ಗೆಲುವು ಇದ್ದದ್ದೇ ಕ್ರೀಡಾ ಸ್ಪೂರ್ತಿಯಿಂದ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಎಂಎಂ ಕಾಲೇಜಿನ ಪ್ರಾಚಾರ್ಯ ಡಾ. ಟಿ.ಎಸ್. ಹಳೆಮನೆ ಹೇಳಿದರು.
ಅವರು ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿದರು.
ಶೈಕ್ಷಣಿಕ ಜೀವನದಲ್ಲಿ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದೂ ಮುಖ್ಯ. ಎಲ್ಲರಲ್ಲೂ ಜೀವನ ಸ್ಪೂರ್ತಿ ಉಂಟುಮಾಡುವ ಶಕ್ತಿ ಕ್ರೀಡೆಯಲ್ಲಿ ಇದೆ ಎಂದರು.
ಎನ್ಎಸ್ಎಸ್ ಜಿಲ್ಲಾ ನೋಡಲ್ ಅಧಿಕಾರಿ ಜಿ.ಟಿ.ಭಟ್ ಮಾತನಾಡಿ ವಿದ್ಯಾರ್ಥಿಗಳು ದೈಹಿಕ ಶ್ರಮ ಬೀಳುವ ಈ ಕ್ರೀಡೆಯಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು ಇಂದು ದೈಹಿಕ ಸದೃಢತೆಗೆ ಆಧುನಿಕ ಪರಿಕರಗಳನ್ನು ಬಳಸುತ್ತೇವೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವುದರಿಂದ ನೈಸರ್ಗಿಕವಾಗಿಯೇ ನಮ್ಮ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂದರು.
ಕಾಲೇಜಿನ ಪ್ರಾಧ್ಯಾಪಕರು,ಶಿಕ್ಷಕೇತರ ಸಿಬ್ಬಂದಿ ಗಳು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.