ಸಿದ್ದಾಪುರ: ಸ್ಥಳೀಯ ಶ್ರೀವಿನಾಯಕ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ವತಿಯಿಂದ ಪಟ್ಟಣದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ವಿತರಣೆ ಮಾಡಲಾಯಿತು.
ಸಂಸ್ಥೆಯ ಅಧ್ಯಕ್ಷ ಆನಂದ ನಾಯ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿದ್ದಾಪುರದಲ್ಲಿ ಪ್ರಸಕ್ತ ಸಾಲಿನಲ್ಲಿ ನೀರಿಗೆ ಬರ ಉಂಟಾಗಿದೆ. ನಮ್ಮ ಸಂಸ್ಥೆಯಿಂದ ಪ್ರತಿ ದಿನ ಸಾಧ್ಯವಾದಷ್ಟು ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಾಯಕ ನಾಯ್ಕ ಮಾತನಾಡಿ, ಮುಂದಿನ ಒಂದು ವಾರದವರೆಗೂ ಈ ಸೇವೆಯನ್ನು ಸಂಸ್ಥೆಯಿಂದ ಮುಂದುವರಿಸಲಾಗುವುದು. ಕುಡಿಯುವ ನೀರಿನ ಅವಶ್ಯಕತೆ ಇರುವವರು ಸಂಸ್ಥೆಯನ್ನು ಸಂಪರ್ಕಿಸುವಂತೆ ವಿನಂತಿಸಿಕೊಂಡರು.
ಸಂಸ್ಥೆಯ ನಿರ್ದೇಶಕರುಗಳು, ಪ್ರಧಾನ ವ್ಯವಸ್ಥಾಪಕ ಶ್ರೀಧರ ಹೆಗಡೆ, ವ್ಯವಸ್ಥಾಪಕ ಪ್ರಶಾಂತ ನಾಯ್ಕ ಹಾಗೂ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.