ಸಿದ್ದಾಪುರ: ಉತ್ತರ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ರಿ) ಇವರ ಜಂಟಿ ಆಶ್ರಯದಲ್ಲಿ ಆ. 26 ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಚೇತನಾ ಪದವಿ ಪೂರ್ವ ಕಾಲೇಜು ಸಭಾಭವನದಲ್ಲಿ ಹೊಸ ಶಿಕ್ಷಣ ನೀತಿ ಹಾಗೂ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳು ಈ ವಿಷಯಗಳ ಕುರಿತು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳು ತಪ್ಪದೇ ಭಾಗವಹಿಸಬೇಕೆಂದು ಉತ್ತರ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಕಾರ್ಯಾಧ್ಯಕ್ಷರು ಹಾಗೂ ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ|| ಶಶಿಭೂಷಣ ವಿನಾಯಕ ಹೆಗಡೆ ದೊಡ್ಡನೆ ಅವರು ಕೋರಿದ್ದಾರೆ.