ಶಿರಸಿ: ವಿಶ್ವ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಸುಧರ್ಮಾ ಸಭಾಂಗಣದಲ್ಲಿ ಜೂನ್ 21ರಂದು ವಿಶ್ವ ಯೋಗ ದಿನಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಅಂದು ಬೆಳಗ್ಗೆ ಆರು ಗಂಟೆಗೆ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಯೋಗ ದಿನಾಚರಣೆ ಹಾಗೂ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ. ಸೋಂದಾ ಗ್ರಾಮ ಪಂಚಾಯತ, ಜಾಗೃತ ವೇದಿಕೆ ಸೋಂದಾ, ಸ್ವರ್ಣವಲ್ಲಿ ಮಠದ ರಾಜರಾಜೇಶ್ವರಿ ವಿದ್ಯಾ ಸಂಸ್ಥೆ, ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ, ಶ್ರೀ ರಾಜರಾಜೇಶ್ವರಿ ಯುವಕ ಸಂಘ, ಸ್ವರ್ಣವಲ್ಲೀ ಮಾತೃ ಮಂಡಳಿ ಮುಂತಾದ ಸಂಘಟನೆಗಳ ಸಹಕಾರದಲ್ಲಿ ಯೋಗ ದಿನಾಚರಣೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಪಾಲ್ಗೊಳ್ಳುವಂತೆ ಶ್ರೀಮಠದ ಪ್ರಕಟಣೆ ತಿಳಿಸಿದೆ.