ಶಿರಸಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸಂಜೆ ಶಿರಸಿ ಬ್ಲಾಕ್ ಕಾಂಗ್ರೆಸ್ ಹಾಗೂ ಪರಿಶಿಷ್ಟ ಜಾತಿ ವಿಭಾಗ ವತಿಯಿಂದ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ದಿ. ಶಂಕರ ನಾಗು ನೇತ್ರೆಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಗೌಡ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ಶಿರಸಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಶೈಲೇಶ್ ಗಾಂಧಿ, ಕಾಂಗ್ರೆಸ್ ಮುಖಂಡ ನಾಗೇಶ ಪಾವಸ್ಕರ್, ರಘು ಕಾನಡೆ, ಪ್ರಕಾಶ ಪಾಟನಕರ್, ಉಮೇಶ್ ಪಾವಸ್ಕರ್, ತಾರಾನಾಥ್, ಅಶೋಕ್ ನೇತ್ರೆಕರ್, ಜಿಲ್ಲಾ ಸಾಮಾಜಿಕ ಜಾಲ ತಾಣದ ಸಂಚಾಲಕ ಪ್ರಸನ್ನ ಶೆಟ್ಟಿ, ಜಾನಸನ್ ರೋಡ್ರಿಗಸ್ ಮುಂತಾದವರು ಉಪಸ್ಥಿತರಿದ್ದರು.