• Slide
    Slide
    Slide
    previous arrow
    next arrow
  • ಒಕ್ಕೂಟ ಸರಕಾರದ ಅಕ್ಕಿ ನಿರಾಕರಣೆಗೆ ಸಿಪಿಐಎಂ ಖಂಡನೆ

    300x250 AD

    ಕಾರವಾರ: ಕರ್ನಾಟಕ ಸರಕಾರ ಜುಲೈ ಒಂದರಿ0ದ ಎಲ್ಲ ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ಈಗ ನೀಡಲಾಗುತ್ತಿದ್ದ ಐದು ಕೆಜಿ ಅಕ್ಕಿಯನ್ನು ಹೆಚ್ಚಿಸಿ ತಲಾ 10 ಕೆಜಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿ ಪ್ರಕಟಿಸಿದ್ದು ಸ್ವಾಗತಾರ್ಹವಾಗಿದೆ. ಆದರೆ ಒಕ್ಕೂಟ ಸರಕಾರವು ರಾಜ್ಯಕ್ಕೆ ಹೆಚ್ಚುವರಿ ಆಹಾರಧಾನ್ಯ ನೀಡುವಲ್ಲಿ ಸಂಕುಚಿತ ರಾಜಕೀಯ ಮಾಡುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಯಮುನಾ ಗಾಂವ್ಕರ್ ಹೇಳಿದ್ದಾರೆ.

    ರಾಜ್ಯ ಸರಕಾರದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೆಚ್ಚುವರಿ ಆಹಾರಧಾನ್ಯ ನೀಡಲು ಭಾರತ ಆಹಾರ ನಿಗಮದ ಅಧಿಕಾರಿಗಳು ಒಪ್ಪಿದ್ದರೂ ಕೂಡಾ, ಒಕ್ಕೂಟ ಸರಕಾರ ಬಡವರ ವಿರೋಧಿಯಾಗಿ ನಿಂತಿರುವುದು ಅಕ್ಷಮ್ಯವಾಗಿದೆ. ಬಿಜೆಪಿ ಮತ್ತು ಒಕ್ಕೂಟ ಸರಕಾರ ತಮ್ಮ ಸಂಕುಚಿತ ಜನ ವಿರೋಧಿ ರಾಜಕಾರಣವನ್ನು ಈ ಕೂಡಲೇ ಕೈ ಬಿಟ್ಟು ಒಪ್ಪಂದದoತೆ ಭಾರತ ಆಹಾರ ನಿಗಮದ ಮೂಲಕ ಆಹಾರ ಧಾನ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಪಕ್ಷವು ಒಕ್ಕೂಟ ಸರಕಾರ ಹಾಗೂ ಪ್ರಧಾನಮಂತ್ರಿಗಳನ್ನು ಬಲವಾಗಿ ಒತ್ತಾಯಿಸುತ್ತದೆ.
    ರಾಜ್ಯ ಸರಕಾರದ ಈ ಯೋಜನೆಯು ಬಡವರ ಹಸಿವು ನೀಗಿಸಲು ನೆರವಾಗುವ ಯೋಜನೆಯಾಗಿದ್ದು ಇದು ಹಸಿವಿನ ಸೂಚ್ಯಂಕದಲ್ಲಿ ಅತ್ಯಂತ ತಳ ಮಟ್ಟದಲ್ಲಿರುವ ನಮ್ಮ ದೇಶವನ್ನು ಸ್ವಲ್ಪವಾದರೂ ಮೇಲೆತ್ತುವ ಯೋಜನೆಯೆಂಬುದನ್ನು ಒಕ್ಕೂಟ ಸರಕಾರ ಅರಿಯಬೇಕು. ಒಕ್ಕೂಟ ಸರಕಾರ ರಾಜ್ಯ ಹಿತದ ವಿರುದ್ದ ನಗ್ಙವಾಗಿ ನಿಂತಿರುವಾಗ ನಮ್ಮ ರಾಜ್ಯ ಬಹುತೇಕರು ಬಿಜೆಪಿ ಎಂಪಿಗಳಿರುವಾಗ ಅವರು ಬಾಯಿ ಹೊಲೆದುಕೊಂಡಿರುವುದು ಅವರ ವಿರೋದಿ ನೀತಿಯನ್ನು ಬಯಲುಗೊಳಿಸುತ್ತದೆ ಎಂದು ಕಟುವಾಗಿ ಠೀಕಿಸಿದೆ. ಜನರಿಗೆ ಆಹಾರಧಾನ್ಯದ ಬದಲು ನಗದು ವರ್ಗಾವಣೆ ಮಾಡುವಂತೆ ಸೂಚಿಸುವ ಬಿಜೆಪಿ ಧೋರಣೆಯು ಬಡವರಪರವಾಗಿರದೇ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಪರವಾದ ನೀತಿಯಾಗಿದೆ.
    ಒಕ್ಕೂಟ ಸರಕಾರದ ಈ ಜನ ವಿರೋಧಿ ನೀತಿಯನ್ನು ಖಂಡಿಸಿ ರಾಜ್ಯದಾದ್ಯಂತ ಜೂ.20ರಂದು ಒಕ್ಕೂಟ ಸರಕಾರದ ಬಡವರ ವಿರೋಧಿ ನೀತಿಯ ಭೂತ ದಹನ ಮಾಡುವ ಮೂಲಕ ತೀವ್ರ ಪ್ರತಿಭಟನಾ ಪ್ರದರ್ಶನ ನಡೆಸಲು ಸಿಪಿಐಎಂ ರಾಜ್ಯ ಸಮಿತಿ ತನ್ನೆಲ್ಲಾ ಘಟಕಗಳಿಗೆ ಮತ್ತು ರಾಜ್ಯದ ಜನತೆಗೆ ಕರೆ ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top