ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ನೀಡುವ ಮಾತ್ರೆಗಳ ಬೆಲೆ ದುಬಾರಿಯಾಗಿದ್ದು, ಕಡಿಮೆ ದರದಲ್ಲಿ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾಗೆಯೇ ಕ್ಯಾನ್ಸರ್ ರೋಗಿಗಳ ಅಟೆಂಡರ್ಸ್‌ಗಳಿಗೂ ಅನುಕೂಲಕಾರಿ ವ್ಯವಸ್ಥೆಯನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಕಡಿಮೆ ದರದಲ್ಲಿ ಔಷಧ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ಚಿಕಿತ್ಸಾ ದರ ನಿಗದಿ ಮಾಡುವ ವ್ಯವಸ್ಥೆ ಒದಗಿಸಲು ಸೊಸೈಟಿಯೊಂದರ ಸ್ಥಾಪನೆಗೆ ಸರ್ಕಾರ ಚಿಂತಿಸಿದೆ ಎಂದು ಅವರು ಹೇಳಿದ್ದಾರೆ.
ಈ ಸೊಸೈಟಿ ಮೂಲಕ ಸಿಎಸ್‌ಆರ್ ನಿಧಿ ಮತ್ತು ಸರ್ಕಾರದ ನಿಧಿಯನ್ನು ಬಳಸಿ ರೋಗಿಯ ಕುಟುಂಬಸ್ಥರಿಗೆ ಅಗತ್ಯ ಸಹಕಾರ ನೀಡಲಾಗುತ್ತದೆ. ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೂತನ ತಂತ್ರಜ್ಞಾನಗಳನ್ನು ಬಳಕೆ ಮಾಡಲು ಅನುಕೂಲವಾಗುವಂತೆ ನೂತನ ಆವಿಷ್ಕಾರಗಳಿಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.