Slide
Slide
Slide
previous arrow
next arrow

ಬಸ್ ನಿಲ್ದಾಣದಲ್ಲಿ ತುಂಬಿ ತುಳುಕುತ್ತಿರುವ ಪ್ರಯಾಣಿಕರು: ಬಸ್ಸಿಗಾಗಿ ಪರದಾಟ

300x250 AD

ದಾಂಡೇಲಿ: ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಇದೀಗ ದಾಂಡೇಲಿ ಬಸ್ ನಿಲ್ದಾಣದಲ್ಲಿಯೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಕಂಡುಬರುತ್ತಿದ್ದಾರೆ.

ನಗರ ಹಾಗೂ ನಗರದ ಸುತ್ತಮುತ್ತಲ ಗ್ರಾಮದ ಮಹಿಳೆಯರು ವಿವಿಧ ಊರುಗಳಿಗೆ ತೆರಳುವ ನಿಟ್ಟಿನಲ್ಲಿ ದಾಂಡೇಲಿಯ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿರುವುದು ಹೆಚ್ಚಾಗತೊಡಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಅದರಲ್ಲಿ ವಿಶೇಷವಾಗಿ ಮಹಿಳಾ ಪ್ರಯಾಣಿಕರು ಆಗಮಿಸಿದ್ದ ಹಿನ್ನೆಲೆಯಲ್ಲಿ ಎಂದಿನ0ತೆ ಸಂಚರಿಸುವ ಬಸ್ಸುಗಳಲ್ಲಿ ಪ್ರಯಾಣಿಕರು ತುಂಬಿಹೋಗಿದ್ದರಿ0ದ ಬಸ್ ನಿಲ್ದಾಣಕ್ಕೆ ಬಂದಿದ್ದ ಹೆಚ್ಚಿನ ಪ್ರಯಾಣಿಕರು ಮರಳಿ ಮನೆಗೆ ಹೋಗುವಂತಹ ಸಂದರ್ಭ ಇಂದು ಎದುರಾಗಿತ್ತು.

300x250 AD

ಒಟ್ಟಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಆರಂಭವಾದಾಗಿನಿ0ದ ದಾಂಡೇಲಿ ನಗರದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇದೀಗ ಸಾರಿಗೆ ಬಸ್ಸುಗಳಲ್ಲಿ ಸಂಚರಿಸುತ್ತಿರುವುದು ಕಂಡು ಬರುತ್ತಿದೆ.

Share This
300x250 AD
300x250 AD
300x250 AD
Back to top