ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 6 ರಿಂದ 10 ನೇ ತರಗತಿ ಕ್ರೀಡಾಪಟು ವಿದ್ಯಾರ್ಥಿಗಳಿಗೆ ವಾರ್ಷಿಕ ರೂ 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿಗಳಿಗೆ ವೇತನವನ್ನು ಪಡೆಯಲು ಮಾದ್ಯಾಮಿಕ ಅಥವಾ ಪ್ರೌಢಾ ಶಾಲೆಯಲ್ಲಿ ಓದುತ್ತಿರುವ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು 2022-23 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು ಮಾಧ್ಯಮಿಕ ಅಥವಾ ಪ್ರೌಢಾ ಶಾಲೆಯಲ್ಲಿ 6 ರಿಂದ 10 ನೇ ತರಗತಿಯಲ್ಲಿ ಓದಿರಬೇಕು, ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ಏ.1 ರಿಂದ ಮಾ.31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಏ.1 ರಿಂದ ಮಾ.31 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಕಣಿಸಲಾಗುವುದು, ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ, ಒಬ್ಬ ಕ್ರೀಡಾಪಟು ಒಂದಕ್ಕಿ0ತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ, ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂಪಾಯಿ ರೂ.10,000 ಮಾತ್ರ ಮಂಜೂರು ಮಾಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಜು 31 ರೊಳಗಾಗಿ ವೆಬ್‌ಸೈಟ್ https://sevasinduservices.Karnataka.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ tel:+919480886551ಗೆ ಸಂಪರ್ಕಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.