ಕಾರವಾರ: ಜೂ.21ರಂದು ನಡೆಯುವ 9 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಆಯೋಜಿಸಿದ್ದ ಯೋಗ ಜಾಥಾಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಚಾಲನೆ ನೀಡಿದರು.
ಯೋಗ ಜಾಥಾವು ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭಗೊoಡು ಪಿಕಳೆ ರಸ್ತೆ, ಗ್ರೀನ್ ಸ್ಟ್ರೀಟ್, ಸುಭಾಸ್ ವೃತ್ತ, ಸವಿತಾ ಸರ್ಕಲ್ ಮೂಲಕ ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿಯಲ್ಲಿ ಜಾಥಾ ಕೊನೆಗೊಂಡಿತು. ಜಾಥಾದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನ್ನಪೂರ್ಣ ವಸ್ತ್ರದ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಶೆಟ್ಟಿ, ಆಯುಷ್ ಇಲಾಖೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಆಯುಷ್ ವೈದ್ಯಧಿಕಾರಿಗಳು, ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ ದೈಹಿಕ ಶಿಕ್ಷಣ ಅಧಿಕಾರಿ ಸಾಂಗ್ಲಿಯವರು, ಪ್ರಕಾಶ ನಾಯಕ, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಯೋಗ ಆಸಕ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿ ಯೋಗ ಜಾಥಾವನ್ನು ಯಶಸ್ವಿಗೊಳಿಸಿದಕ್ಕಾಗಿ ಜಿಲ್ಲಾ ಆಯುಷ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದರು.