ಭಟ್ಕಳ: ಚಾತುರ್ಮಾಸ ವೃತದಲ್ಲಿದ್ದ ಉಜಿರಿಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಊರಿಗೆ ಹಿಂತಿರುಗುವ ವೇಳೆ ಮಾರ್ಗ ಮಧ್ಯದಲ್ಲಿ ನಿಲ್ಲಿಸಿದ ವಾಹನದಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಬುಲೆಟ್ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ರಾಹುತನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಮಂಜುನಾಥ ನಾಯ್ಕ (40) ಭಟ್ಕಳ ತಾಲೂಕಿನ ಜಾಲಿಯ ನಿವಾಸಿ ಎಎಂದು ತಿಳಿದು ಬಂದಿದ್ದು, ಇವರು ಭಟ್ಕಳ ಪಿಎಲ್ಲಿ ಬ್ಯಾಂಕ್ ನಿರ್ದೇಶಕರು ಕೂಡ ಆಗಿದ್ದರು. ಬೈಕ್ ಸವಾರ ಉಪ್ಪುಂದ ಕರ್ಕಿಕಳಿ ನಿವಾಸಿ ಕಿರಣ್ (21) ಗಂಭೀರ ಗಾಯಗೊಂಡಿದ್ದಾನೆ.
ಅಪಘಾತದ ರಭಸಕ್ಕೆ ರಸ್ತೆ ದಾಟುತ್ತಿದ್ದ ವ್ಯಕ್ತಿಯು ಬದಿಗೆ ಎಸೆಯಲ್ಪಟ್ಟು ಅಲ್ಲಿಯೇ ಮೃತಟ್ಟಿದ್ದಾರೆ. ಬುಲೆಟ್ ಬೈಕ್ ಸವಾರ ಡಿವೈಡರ್ ಬದಿಗೆ ಬಿದ್ದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನು ಚಿಕಿತ್ಸೆಗಾಗಿ ಕುಂದಾಪುರಕ್ಕೆ ಕೊಂಡೊಯ್ಯಲಾಗಿದೆ.
ಬೈಂದೂರು ಪೆÇಲೀಸ್ ಪಿಎಸೈ ಪವನ್ ನಾಯಕ್ ಹಾಗೂ ಸಿಬ್ಬಂಧಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.