ಸಿದ್ದಾಪುರ: ಕಾಲೇಜಿನ ಆಡಳಿತ ಮಂಡಳಿಯವರು ಸರ್ಕಾರ ನಿಗದಿಪಡಿಸಿರುವುದದಕ್ಕಿಂತ ಹೆಚ್ಚಿನ ಶುಲ್ಕ ವಿಧಿಸುತ್ತಿದ್ದಾರೆ. ಇದರಿಂದ ತಮಗೆ ಅನ್ಯಾಯ ಆಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ಧನ್ವಂತರಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮಹಾವಿದ್ಯಾಲಯದ ಎದುರಿನ ಶಿರಸಿ- ಸಿದ್ದಾಪುರ ಮುಖ್ಯ ರಸ್ತೆಯ ಪಕ್ಕ ಎಂ.ಜಿ.ಸಿ ಕಾಲೇಜಿನ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬೇಕೇ ಬೇಕು ನ್ಯಾಯ ಬೇಕು ಎನ್ನುವ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಸರ್ಕಾರದಿಂದ ನಿಗದಿಪಡಿಸಿದ 300 ರೂ. ಶುಲ್ಕಕ್ಕೆ ಕಾಲೇಜು ಆಡಳಿತ ಮಂಡಳಿ 2600 ರೂ. ಪಡೆಯುತ್ತಿದ್ದಾರೆ. ಹೆಚ್ಚಿನ ಹಣ ವಸೂಲಿ ಮಾಡುತ್ತಾರೆ ಎಂದು ಪ್ರತಿಭಟನಾ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ರೈತ ಮುಖಂಡ ವೀರಭದ್ರ ನಾಯ್ಕ ಮಾತನಾಡಿ ಬಡವರ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ದೂರದ ಊರುಗಳಿಂದ ಇಲ್ಲಿ ಬಂದಿರುತ್ತಾರೆ. ಹೀಗೆ ಕಾರಣವಿಲ್ಲದೆ ಹೆಚ್ಚಿನ ಹಣ ಪಡೆಯುವುದು ಆಡಳಿತ ಮಂಡಳಿಯ ಕ್ರಮ ಸರಿಯಲ್ಲ. ಹಣದ ವಿಷಯಕ್ಕೆ ವಿದ್ಯಾರ್ಥಿಗಳಿಗೆ ತೊಂದರೆ ಕೊಡಬೇಡಿ. ಬಡವರ ಮಕ್ಕಳ ಹೊಟ್ಟೆಮೇಲೆ ಹೊಡಿಯಬೇಡಿ. ಈ ಮಕ್ಕಳು ವಿದ್ಯಾಭ್ಯಾಸ ಮುಗಿಸಿ ವೈದ್ಯರಾಗಿ ದೇಶ ಸೇವೆ ಸಲ್ಲಿಸುವಂತಹ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸುತ್ತೇವೆ. ಕೂಡಲೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು, ಸಚಿವರು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿ ವಿದ್ಯಾಭ್ಯಾಸಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದರು.
ಆಡಳಿತ ಮಂಡಳಿಯ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ದೊಡ್ಮನೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ಅವರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು. ನಂತರ ವಿದ್ಯಾರ್ತಿಗಳು ಪ್ರತಿಭಟನೆಯನ್ನು ಕೈಬಿಟ್ಟರು.