Slide
Slide
Slide
previous arrow
next arrow

ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

300x250 AD

ಕುಮಟಾ: ಮಿರ್ಜಾನ್‌ ಶಾಖಾಮಠದ ಪೂಜ್ಯರಾದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥಜೀಯವರ ದಿವ್ಯ ಸಾನಿಧ್ಯದಲ್ಲಿ ಜೂ.21 ರಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

9ನೇ ಅಂತರರಾಷ್ಷ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ, ಉದ್ಗಾಟಿಸಿದ, ಮಿರ್ಜಾನ್‌ ಶಾಖಾಮಠದ ಪೂಜ್ಯರಾದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥಜೀಯವರು ಮಾತನಾಡಿ, ಪತಂಜಲಿ ಮಹರ್ಷಿಯವರು ಯೋಗಸೂತ್ರಗಳ ಮೂಲಕ ಮೊಟ್ಟಮೊದಲು ಯೋಗವನ್ನು ಜಗತ್ತಿಗೆ ಪರಿಚಯಿಸಿದರು. ಯೋಗೇನ ಚಿತ್ತಸ್ಯ ಪದೇನ ವಾಚಾಂ ಮಲಂ ಶರೀರಸ್ಯ ಚ ವೈದ್ಯಕೇನ| ಯೋಪಾಕರೋತ್ತಂ ಪ್ರವರಂ ಮುನೀನಾಂ ಪತಂಜಲಿಂ ಪ್ರಾಂಜಲಿಂರಾನತೋಸ್ಮಿ|| ಅಂತರಂಗದ ದೋಷಗಳನ್ನು ಯೋಗದರ್ಶನದ ಮೂಲಕ,ಶಬ್ದಪ್ರಯೋಗದ ದೋಷಗಳನ್ನು ವ್ಯಾಕರಣ ಮಹಾಭಾಷ್ಯದ ಮೂಲಕ, ಜಗತ್ತಿಗೆ ಶರೀರದ ದೋಷಗಳನ್ನು ವೈದ್ಯಶಾಸ್ತ್ರದ ಮೂಲಕ ದೂರಗೊಳಿಸಿದ ಶ್ರೇಷ್ಠ ಮುನಿ ಪತಂಜಲಿಯವರಿಗೆ ಕೈಮುಗಿದು ನಮಿಸುವೆ ಎಂಬುದು ಯೋಗ ಮಂತ್ರದ ಅರ್ಥ. ಯೋಗಾಸನ ಮತ್ತು ಪ್ರಾಣಾಯಾಮದಿಂದ ನಮ್ಮ ದೇಹ ಮತ್ತು ಮನಸ್ಸಿನ ಆರೋಗ್ಯ ಉತ್ತಮವಾಗಿ ಇಟ್ಟುಕೊಳ್ಳಲು ಸಾಧ್ಯ ಎಂದು ಆಶೀರ್ವಚನ ನೀಡಿದರು.

ಬಿಜಿಎಸ್ ಸಂಸ್ಥೆಯ ಆಡಳಿತ ಅಧಿಕಾರಿ ಜಿ. ಮಂಜುನಾಥ ಮಾತನಾಡಿ, ಓಂಕಾರದ ಮಹತ್ವ, ಧ್ಯಾನ, ಯೋಗಾಸನ ಮತ್ತು ಪ್ರಾಣಾಯಾಮ ಇಂದು ಜಗತ್ತಿನಲ್ಲಿ ಎಷ್ಟು ಪ್ರಾಮುಖ್ಯತೆ ಪಡೆದಿದೆ, ಪ್ರಪಂಚದ ಬಹಳಷ್ಟು ದೇಶಗಳು ಇಂದು ತಮ್ಮ ದೈನಂದಿನ ಜೀವನದಲ್ಲಿ ಯೋಗಾಸನವನ್ನು ಹೇಗೆ ಅಳವಡಿಸಿಕೊಂಡಿದೆ ಎಂದು ತಿಳಿಸಿ, ಮಕ್ಕಳಿಗೆ ಯೋಗ ಪ್ರತಿಜ್ಞಾ ವಿಧಿ ಬೋಧಿಸಿದರು.

300x250 AD

ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಲೀನಾ ಎಂ. ಗೊನೇಹಳ್ಳಿ ಪ್ರಸ್ತುತ ದಿನಗಳಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದು. ಹಿರಿಯ ಶಿಕ್ಷಕರಾದ ಎಂ. ಜಿ. ಹಿರೇಕುಡಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಮಕ್ಕಳು ಉಪಸ್ಥಿತರಿದ್ದು, ಬಿಜಿಎಸ್ ಕೇಂದ್ರೀಯ ವಿದ್ಯಾಲದಯದ ವಿಶಾಲ ಮೈದಾನದಲ್ಲಿ ಯೋಗಾಸನ ಮಾಡಿ 9ನೇ ಅಂತರರಾಷ್ಷ್ರೀಯ ಯೋಗ ದಿನಾಚರಣೆಗೆ ಹೆಚ್ಚಿನ ಮೆರುಗು ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ನಾಯಕ, ವೈಭವ ಗಾಂವಕರ ಮತ್ತು ನಾಗರತ್ನ ನಾಯ್ಕ ಸೂರ್ಯ ನಮಸ್ಕಾರ, ಪ್ರಾಣಾಯಾಮ ಅಲ್ಲದೇ ಕುಳಿತು, ನಿಂತು ಮತ್ತು ಮಲಗಿ ಮಾಡಬಹುದಾದ ಯೋಗಾಸನದ ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆ ಮೂಲಕ ಮಾಡಿ ತೋರಿಸಿದರು.
ಕುಮಾರಿ ಶುಭಾಂಗಿ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಕುಮಾರ ಆದಿಶೇಷ ಮತ್ತು ಸಂಗಡಿಗರು ವೇದಘೋಷ ಮೊಳಗಿಸಿದರು. ಶಿಕ್ಷಕಿ ಸ್ವಾತಿ ಜೈನ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪೂರ್ಣಿಮಾ ಹೆಗಡೆ ಸರ್ವರನ್ನೂ ಸ್ವಾಗತಿಸಿದರು. ಶಿಕ್ಷಕಿ ಕರಿಯಮ್ಮ ಆರ್. ವಂದಿಸಿದರು.

Share This
300x250 AD
300x250 AD
300x250 AD
Back to top